ತುಮಕೂರು: 2005ರ ಪಾವಗಡ ವೆಂಕಟಮ್ಮನಹಳ್ಳಿ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಮಾಜಿ ನಕ್ಸಲೀಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಾವಗಡ ತಾಲೂಕಿನ ನ್ಯಾಯಾಲಯದಲ್ಲಿ ಕೇಸ್ ನಡೆಯುತ್ತಿದೆ. ಆದರೆ ಕೋರ್ಟ್ ವಿಚಾರಣೆಗೆ ನೋಟಿಸ್ ನೀಡಿದ್ದರೂ ಪದೇ ಪದೇ ತನಿಖೆಗೆ ಗೈರಾಗುತ್ತಿದ್ದರು. ಕೋರ್ಟ್ ಸೂಚನೆ ಮೇರೆಗೆ 4 ಮಾವೋವಾದಿಗಳನ್ನು ಆಂಧ್ರ ಪ್ರದೇಶದ ವಿವಿಧ ಭಾಗದಲ್ಲಿ ಪತ್ತೆ ಹಚ್ಚಿ ಪಾವಗಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.