Categories: ಕೋಲಾರ

ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛಗೊಳಿಸಿದ ಕೇಸ್: ನಾಲ್ವರ ಅಮಾನತು

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಿದ ಪ್ರಕರಣ ಸಂಬಂಧ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್ ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರು ಕಳೆದ ಹಲವು ದಿನಗಳಿಂದ ಮಕ್ಕಳಿಗೆ ಹೊಡೆಯುವುದು, ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಕೂರಿಸಿ ಹಿಂಸೆ ನೀಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಇದರ ಬೆನ್ನಲ್ಲೇ ಮಕ್ಕಳಿಂದ ಶೌಚಾಲಯದ ಹೊಂಡ ಸ್ವಚ್ಛಗೊಳಿಸಿದ ವಿಡಿಯೋ ವೈರಲ್‌ ಆಗಿತ್ತು. ಇದರ ಬೆನ್ನಲ್ಲೇ ವಸತಿ ಶಾಲೆಗೆ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್, ಪರಿಶೀಲನೆ ನಡೆಸಿದ್ದರು. ಬಳಿಕ ಮಾತನಾಡಿದ್ದ ಅವರು, ಶೌಚಾಲಯ ಕ್ಲೀನ್ ಮಾಡಿಸಿದವರನ್ನು ಅಮಾನತು ಮಾಡುತ್ತೇವೆ. ಶಿಕ್ಷಕ ಅಭಿಷೇಕ್​ನನ್ನು​ ಕೆಲಸದಿಂದ ತೆಗೆದು ಹಾಕುತ್ತೇವೆ ಎಂದು ಹೇಳಿದ್ದರು. ಸದ್ಯ ನಾಲ್ವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Ashika S

Recent Posts

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

9 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

32 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

50 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

1 hour ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago