News Karnataka Kannada
Saturday, April 27 2024
ಕೋಲಾರ

ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಹೆಜ್ಜೇನು ದಾಳಿ

Hedgehog attacked during BJP protest in Kolar
Photo Credit : News Kannada

ಕೋಲಾರ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಆದರೆ, ಕೋಲಾರದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಹೆಜ್ಜೇನು ದಾಳಿ ನಡೆಸಿದ ಹಿನ್ನೆಲೆ ಸಂಸದ ಎಸ್. ಮುನಿಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು, ಕಾರ್ಯಕರ್ತರು ಮತ್ತು ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸರು ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ.

ಈ ಪೈಕಿ ಕೆಲವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ರಾಜ್ಯದಲ್ಲಿ ಬರಗಾಲ ಇದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಬಿಜೆಪಿ ಅವಧಿಯ ಕಾಮಗಾರಿಗಳನ್ನು ತಡೆದಿರುವುದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುತ್ತಿದೆ.

ಅಷ್ಟೇ ಅಲ್ಲದೆ, ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿ ಇಂದು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು