Categories: ಕೋಲಾರ

ನೀಲ್ಗಾಯ್ ತಿವಿದು ಕೋಲಾರ ಮೂಲದ ನೌಕಾಪಡೆ ಯೋಧ ಸಾವು

ಕೋಲಾರ: ನೌಕಾಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೋಲಾರ ಮೂಲದ ಯೋಧರೊಬ್ಬರು ನೀಲ್ಗಾಯ್ ದಾಳಿಯಿಂದ ಮೃತಪಟ್ಟಿದ್ದಾರೆ.

ನಗರದ ಗಲ್​ಪೇಟೆ ನಿವಾಸಿ ಹರ್ಷಿತ್ ಪ್ರಸನ್ನ (22) ಎನ್ನುವ ಯೋಧ ಸಾವನ್ನಪ್ಪಿದವರು. ಜಿಂಕೆ ಮಾದರಿಯ ನೀಲ್ಗಾಯ್ ಎಂಬ ಕಾಡುಪ್ರಾಣಿಯ ಮರಿಗಳು, ಪ್ಲಾಸ್ಟಿಕ್ ತಿನ್ನಲು ಮುಂದಾದಾಗ ಅದನ್ನು ತಡೆಯಲು ಇವರು ಹೋಗಿದ್ದಾರೆ. ಈ ವೇಳೆ ನೀಲ್ಗಾಯ್ ಹಿಂಬದಿಯಿಂದ ಬಂದು ಹರ್ಷಿತ್ ಬೆನ್ನಿಗೆ ತಿವಿದ ಕಾರಣ ತೀವ್ರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇವರು ಕಳೆದ 4 ವರ್ಷಗಳಿಂದ ನೌಕಾಪಡೆಯ ನಾವಿಕನಾಗಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಕೋಲಾರದ ರುಧ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಯಿತು.

Ashitha S

Recent Posts

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

51 seconds ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

19 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

24 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

39 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

45 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

56 mins ago