ಕೋಲಾರ: ಹೆಣ್ಣು ಮಗು ಹುಟ್ಟಿತು ಎಂಬ ಕಾರಣಕ್ಕೆ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಲೋಕೇಶ್ (34) ನೇಣಿಗೆ ಶರಣಾದ ವ್ಯಕ್ತಿ. ಲೋಕೇಶ್ ಗೆ ಈ ಮೊದಲು ಮೂವರು ಹೆಣ್ಣು ಮಕ್ಕಳು ಜನಿಸಿದ್ದರು. ಮತ್ತೆ 4ನೇ ಮಗುವೂ ಕೂಡ ಹೆಣ್ಣು ಮಗುವಾಗಿರುವುದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.