ಕೋಲಾರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75ರ ಲಕ್ಷ್ಮೀಸಾಗರ ಗೇಟ್ ಬಳಿ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಎಲ್ಸಿ ರವಿಕುಮಾರ್ ಅವರ ವಿರುದ್ಧ ಸ್ಥಳೀಯರು ವಾಗ್ದಾಳಿ ನಡೆಸಿದ್ದಾರೆ.
ಹೊಸಕೋಟೆ ತಾಲೂಕಿನ ಶಿವನಪುರ ಗ್ರಾಮದ ನಿವಾಸಿ ಗೋಪಾಲ್ ಎಂಬವರು ಕೋಲಾರಕ್ಕೆ ತೆರಳುತ್ತಿದ್ದಾಗ ಎಂಎಲ್ಸಿ ರವಿಕುಮಾರ್ ಪ್ರಯಾಣಿಸುತ್ತಿದ್ದ ಕಾರು ಹಿಂದಿನಿಂದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಹೊರತಾಗಿಯೂ ಕಾರಿನಿಂದ ಇಳಿಯದೆ ಶಾಸಕರು ದುರಹಂಕಾರ ತೋರಿಸಿದ್ದಾರೆ ಎಂದು ಆರೋಪಿಸಿದ ಸ್ಥಳೀಯರು, ರವಿ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ವೇಮಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದರು ಮತ್ತು ಗಾಯಗೊಂಡ ಬೈಕ್ ಸವಾರನನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು.