ಕೋಲಾರ: ಅಯೋಧ್ಯೆ ರಾಮಮಂದಿರವನ್ನು ಜ.22ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಸಕಲ ಸಿದ್ಧತೆಗಳು ನಡೆಯುತ್ತಿದೆ. ಅಯೋಧ್ಯೆಯಲ್ಲಿ ಶ್ರೀ ರಾಮನ ಮೂರ್ತಿ ಪ್ರತಿಷ್ಟಾಪನೆಯಲ್ಲಿ ಪ್ರಮುಖರಿಗೆ ಆಹ್ವಾನ ಪತ್ರಿಕೆಗಳನ್ನು ಕೂಡ ಕಳುಹಿಸಲಾಗುತ್ತಿದೆ. ಇದೀಗ ಕೋಲಾರ ಮೂಲದ ಅರ್ಚಕರಿಗೆ ಆಹ್ವಾನ ನೀಡಲಾಗಿದೆ.
ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಲು ಕೋಲಾರ ಮೂಲದ ಅರ್ಚಕ ರಮೇಶ್ ಭಟ್ ಅವರನ್ನು ಆಹ್ವಾನಿಸಲಾಗಿದೆ. ರಮೇಶ್ ಭಟ್ ಅವರು ಕೋಲಾರ ಜಿಲ್ಲೆಯ ಕಲ್ಲೂರು ಗ್ರಾಮದ ನಿವಾಸಿ. ಇದೀಗ ಇವರನ್ನು ರಾಮಮಂದಿರ ಉದ್ಘಾಟನೆಯ ವೇಳೆ ಪರಿಚಾರಕ ಋತ್ವಿಕ್ ರಾಗಿ ಭಾಗವಹಿಸಲು ರಾಮಮಂದಿರ ದೇವಾಲಯ ಪ್ರತಿಷ್ಠಾಪನಾ ಸಮಿತಿಯು ಆಹ್ವಾನಿಸಿದೆ.
ರಮೇಶ್ ಭಟ್ ಅವರು ಕೋಲಾರ ನಗರದ ಆರ್.ಎಲ್ ಜಾಲಪ್ಪ ಆಸ್ಪತ್ರೆ ಆವರಣದಲ್ಲಿನ ಗಣಪತಿ ದೇಗುಲದಲ್ಲಿ ಅರ್ಚಕರಾಗಿ 25 ವರ್ಷ ಸೇವೆ ಸಲ್ಲಿಸಿದ್ದಾರೆ. ಅವರು ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಶಿವ-ವಿಷ್ಣು ದೇಗುಲದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.