ಕೋಲಾರ: ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಕೊನೆಗೂ ಗುಜರಾತಿನಲ್ಲಿ ಪತ್ತೆಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಿ ಬೇಕಿದ್ದ ಲಾರಿ ಗುಜರಾತ್ನ ಅಹಮದಾಬಾದ್ನಲ್ಲಿ ಸಿಕ್ಕಿದ್ದು, ಲಾರಿ ಚಾಲಕ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಚಾಲಕ ಅನ್ವರ್ ಲಾರಿಯಲ್ಲಿ ಅಳವಡಿಸಿದ್ದ ಜಿಪಿಎಸ್ ಕಿತ್ತೆಸೆದು ಅಹಮದಾಬಾದ್ಗೆ ಚಲಾಯಿಸಿಕೊಂಡು ಹೋಗಿದ್ದಾನೆ. ಬಳಿಕ ಅಲ್ಲಿ ಟೊಮೆಟೊವನ್ನು ಅರ್ಧ ದರಕ್ಕೆ ಮಾರಾಟ ಮಾಡಿ ಇದೀಗ ತಲೆಮರಿಸಿಕೊಂಡಿದ್ದಾನೆ.
ಇನ್ನು ಟೊಮೆಟೊ ಮಾರಾಟದಿಂದ ಬಂದ ಹಣದೊಂದಿಗೆ ನಾಪತ್ತೆಯಾಗಿರುವ ಚಾಲಕ ಅನ್ವರ್ ವಿರುದ್ದ ಮೆಹತ್ ಟ್ರಾನ್ಸ್ ಪೋರ್ಟ್ ಗೆ ಸೇರಿದ ಮುನಿರೆಡ್ಡಿ ಅಹಮದಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲಾರಿ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.