News Karnataka Kannada
Thursday, May 02 2024
ಕೋಲಾರ

ಮೋದಿ ಅವರನ್ನು ಕೆಳಗಿಳಿಸಿ ರಾಹುಲ್‌ ಗಾಂಧಿಯನ್ನು ದೇಶದ ಪ್ರಧಾನಿ ಮಾಡೋಣ: ಸಿದ್ದರಾಮಯ್ಯ

ಬಿಜೆಪಿ ಸರ್ಕಾರವನ್ನು ಕಿತ್ತೊಗೆದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ ರಾಹುಲ್‌ ಗಾಂಧಿ ಅವರನ್ನು ದೇಶದ ಪ್ರಧಾನಿ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Photo Credit : NewsKarnataka

ಕೋಲಾರ : ಬಿಜೆಪಿ ಸರ್ಕಾರವನ್ನು ಕಿತ್ತೊಗೆದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ ರಾಹುಲ್‌ ಗಾಂಧಿ ಅವರನ್ನು ದೇಶದ ಪ್ರಧಾನಿ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಕುರುಡುಮಲೆ ವಿನಾಯಕನ ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಬಳಿಕ ರೋಡ್ ಶೋನಲ್ಲಿ ಮಾತನಾಡಿದರು. ಬಿಜೆಪಿಯವರು ಮೊದಲಿಗೆ ಗ್ಯಾರಂಟಿ ಜಾರಿ ಸಾಧ್ಯವೇ ಇಲ್ಲ, ರಾಜ್ಯ ದಿವಾಳಿ ಆಗಲಿದೆ ಎನ್ನುವ ಸುಳ್ಳು ಸೃಷ್ಟಿಸಿದರು. ಜಾರಿ ಮಾಡಿದ ಬಳಿಕ ಹೊಸ ಸುಳ್ಳು ಸೃಷ್ಟಿಸಿ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷಗಳ ವಾರಂಟಿ ಇದೆ ಎಂದರು.

ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತವಾಗಿ ಏರಿಸಿತು. ಇದರಿಂದ ನಾಡಿನ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದವು. ಈ ಸಂಕಷ್ಟಕ್ಕೆ ಸ್ಪಂದಿಸಿ ಕಷ್ಟ ಕಡಿಮೆ ಮಾಡುವ ಉದ್ದೇಶದಿಂದ ನಾವು ಐದು ಗ್ಯಾರಂಟಿ ಘೋಷಿಸಿದೆವು. ಅಧಿಕಾರಕ್ಕೆ ಬಂದು ಐದಕ್ಕೆ ಐದನ್ನೂ ಜಾರಿ ಮಾಡಿದೆವು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಂ.ಸಿ. ಸುಧಾಕರ್, ಬೈರತಿ ಸುರೇಶ್, ಮಾಜಿ ಸಚಿವ ರಮೇಶ್ ಕುಮಾರ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ಶಾಸಕರಾದ ಕೊತ್ತೂರು ಮಂಜುನಾಥ್‌, ಕೆ.ವೈ. ನಂಜೇಗೌಡ, ಎಸ್‌.ಎನ್‌. ನಾರಾಯಣಸ್ವಾಮಿ, ಅಭ್ಯರ್ಥಿ ಕೆ.ವಿ. ಗೌತಮ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ. ಲಕ್ಷ್ಮಿನಾರಾಯಣ, ಮುಖಂಡರಾದ ರಾಜೀವ್‌ ಗೌಡ, ಆದಿನಾರಾಯಣ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು