News Karnataka Kannada
Sunday, April 28 2024
ಕೋಲಾರ

ವಿದ್ಯಾರ್ಥಿನಿ ಕೈ ಮುರಿದ ಶಿಕ್ಷಕಿ, ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ

Teacher breaks student's hand, will you be shocked to hear the reason
Photo Credit : News Kannada

ಕೆಜಿಎಫ್‌: ಗಣಪತಿಯನ್ನು ಸಂಕಷ್ಟ ಹರ ಅಂದರೆ ತೊಂದರೆಗಳನ್ನು ವಿಘ್ನಗಳನ್ನು ನಿವಾರಿಸುವ ದೇವರೆಂದೇ ಪರಿಣಗಿಸುತ್ತಾರೆ. ಆದರೆ ದುರದೃಷ್ಟವಶಾತ್‌ ಗಣಪತಿಯನ್ನು ಪೂಜಿಸಿದ್ದಕ್ಕೆ ವಿದ್ಯಾರ್ಥಿ ಕೈ ಮುರಿದ ಪ್ರಸಂಗವೊಂದು ಕೋಲಾರದಲ್ಲಿ ನಡೆದಿದೆ.

ಕೆಜಿಎಫ್ ತಾಲ್ಲೂಕಿನ ಅಲ್ಲಿಕಲ್ಲಿ ಗ್ರಾಮದ ಸರ್ಕಾರಿ ಹಿರಿಯ ಶಾಲೆಯಲ್ಲಿ ಗಣೇಶ ಮೂರ್ತಿಗೆ ಪೂಜೆ ಮಾಡಿದ ವಿದ್ಯಾರ್ಥಿನಿಗೆ ಥಳಿಸಿದ್ದಕ್ಕೆ ಕೈಮುರಿದಿದ್ದ ಆರೋಪದಡಿಯಲ್ಲಿ ಮುಖ್ಯ ಮುಖ್ಯ ಶಿಕ್ಷಕಿ ಹೇಮಲತಾರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಕೋಲಾರ ಡಿಡಿಪಿಐ ಕೃಷ್ಣಮೂರ್ತಿ ಈ ಆದೇಶ ಹೊರಡಿಸಿದ್ದಾರೆ. ಜೊತೆಗೆ ಬಾಲಕಿಯ ಚಿಕಿತ್ಸೆಗೆ ತಗುಲುವ ಖರ್ಚು ವೆಚ್ಚವನ್ನು ಮುಖ್ಯ ಶಿಕ್ಷಕಿಯೇ ಭರಿಸಬೇಕು ಎಂದು ಸೂಚಿಸಿದ್ದಾರೆ.

ಬಳಿಕ ಗ್ರಾಮಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗ ಕ್ಷೇಮ ವಿಚಾರಿಸಿದ ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಮುನಿವೆಂಕಟರಾಮಾಚಾರಿ ಶಾಲಾ ಮಕ್ಕಳ ಪೋಷಕರಿಗೆ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಅದರಂತೆ ಮುಖ್ಯ ಶಿಕ್ಷಕಿ ಹೇಮಲತಾ ಅವರನ್ನ ಶಿಕ್ಷಣಾಧಿಕಾರಿ ಮುನಿವೆಂಕಟರಾಮಾಚಾರಿ ನೀಡಿದ ವರದಿ ಆಧರಿಸಿ ಡಿಡಿಪಿಐ ಕೃಷ್ಣಮೂರ್ತಿ ಮುಖ್ಯ ಶಿಕ್ಷಕಿಯನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಅಲ್ಲಿಕಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿರುವ ಹೇಮಲತಾ ಅವರು, ಕಳೆದ ವಾರ ವಿದ್ಯಾರ್ಥಿನಿ ಭವ್ಯ ಶ್ರೀ ಎಂಬ ವಿದ್ಯಾರ್ಥಿನಿ ಗಣೇಶ ಮೂರ್ತಿಗೆ ಪೂಜೆ ಮಾಡಿದ್ದಕ್ಕೆ ಥಳಿಸಿ ಎಡಗೈ ಮುರಿದಿದ್ದರು. ಈ ಸಂಬಂಧ ಪೋಷಕರು ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ವಿರುದ್ಧ ದೂರು ನೀಡಿದ್ದರು. ಅಲ್ಲದೇ ಮುಖ್ಯ ಶಿಕ್ಷಕಿ ಹೇಮಲತಾರನ್ನ ಅಮಾನತು ಮಾಡುವಂತೆ ಪಟ್ಟು ಹಿಡಿದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು