Categories: ಕೋಲಾರ

ಟೊಮೆಟೋ ಬೆಲೆ ಭಾರೀ ಇಳಿಕೆ: ಆತಂಕದಲ್ಲಿ ರೈತರು

ಕೋಲಾರ: ಟೊಮೆಟೋ ಬೆಳೆ ಕೋಲಾರ ಜಿಲ್ಲೆಯ ರೈತರ ಪಾಲಿಗೆ ಜೂಜಾಟದ ಬೆಳೆಯಾಗಿ ಪರಿಣಮಿಸಿದೆ. ಬೆಳೆ ಇದ್ದಾಗ ಬೆಲೆ ಇರಲ್ಲ, ಬೆಲೆ ಇದ್ದಾಗ ಬೆಳೆ ಬರಲ್ಲ ಇದು ಟೊಮೆಟೋ ಬೆಳೆಗಾರರ ಸ್ಥಿತಿ. ಕಳೆದ ನಾಲ್ಕು ದಿನಗಳಲ್ಲಿ ಟೊಮೆಟೋ ಬೆಲೆ 900 ರಿಂದ 1000 ರೂಪಾಯಿವರೆಗೆ ಇಳಿಕೆಯಾಗಿದೆ. ಬೆಳೆ ಇಳಿಕೆಯಾದ ಬೆನ್ನಲ್ಲೇ ರೈತರಿಗೆ ಆತಂಕ ಶುರುವಾಗಿದ್ದರೆ ಗ್ರಾಹಕರು ಕೊಂಚ ನಿರಾಳವಾಗುತ್ತಿದ್ದಾರೆ.

ಕಳೆದ 2 ತಿಂಗಳಿನಿಂದ ಕೋಲಾರ ಎಪಿಎಂಸಿ ಮಾರುಕಟ್ಟೆ ಷೇರು ಮಾರುಕಟ್ಟೆಯಂತಾಗಿ ರೈತರು ಹಾಗೂ ವ್ಯಾಪಾರಿಗಳಿಗೆ ಹೂಡಿಕೆ ಮಾಡುವ ಕೇಂದ್ರವಾಗಿ ಪರಿಣಮಿಸಿತ್ತು. ಆದರೆ ನಾಲ್ಕು ದಿನಗಳಿಂದ ಟೊಮೆಟೋ ಬೆಲೆ ನಿರಂತರವಾಗಿ ಕುಸಿಯುವ ಮೂಲಕ ರೈತರ ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನದ ಮೊದಲು ಸರಾಸರಿ 15 ಕೆಜಿಯ ಟೊಮೆಟೋ ಬಾಕ್ಸ್‌ 2,500- 2,800 ರೂ.ಗೆ ಮಾರಾಟವಾಗುತ್ತಿತ್ತು. ಭಾನುವಾರ ಅತಿ ಹೆಚ್ಚು ಗುಣಮಟ್ಟ ಇರುವ ಸರಾಸರಿ 15 ಕೆಜಿಯ ಟೊಮೆಟೋ ಬಾಕ್ಸ್ ಬೆಲೆ ಕೇವಲ 1,500 ರೂಪಾಯಿಗೆ ಮಾರಾಟವಾಗಿದೆ.

ಶನಿವಾರ, ಶುಕ್ರವಾರಕ್ಕೆ ಹೋಲಿಕೆ ಮಾಡಿದರೆ 900 ರಿಂದ 1000 ರೂ. ಕಡಿಮೆಯಾಗಿದೆ. ಸದ್ಯ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ತಮಿಳುನಾಡು, ಆಂಧ್ರಪ್ರದೇಶದಿಂದಲೂ ಟೊಮೆಟೋ ಬರುತ್ತಿದ್ದು, ಬೆಲೆ ಇಳಿಮುಖವಾಗುತ್ತಿದೆ.

ಅಷ್ಟೇ ಅಲ್ಲದೇ ಟೊಮೆಟೋ ಖರೀದಿಗೆ ಹೊರ ರಾಜ್ಯದ ವ್ಯಾಪಾರಿಗಳು ಮುಂದಕ್ಕೆ ಬರುತ್ತಿಲ್ಲ. ಪರಿಣಾಮ ಟೊಮೆಟೋ ಬೆಲೆ ಒಂದೇ ಸಮನೆ ಕುಸಿಯುತ್ತಿದೆ.

Ashika S

Recent Posts

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

19 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago