ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಪಾದಾಚಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗಂಗಾರೆಡ್ಡಿ (85) ಮೃತ ದುರ್ದೈವಿ. ಆಂಧ್ರಪ್ರದೇಶ ಮೂಲದ ಗಂಗಾರೆಡ್ಡಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ವಾಸವಾಗಿದ್ದರು. ಗುರುವಾರ ಮಧ್ಯಾಹ್ನ 12:30ರ ಸುಮಾರಿಗೆ ಮೆಜೆಸ್ಟಿಕ್ ಬಸ್ ಸ್ಟ್ಯಾಂಡ್ ಬಳಿ ನಡೆದು ಹೋಗುತ್ತಿದ್ದಾಗ, ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ವೃದ್ಧನಿಗೆ ಡಿಕ್ಕಿ ಹೊಡೆದಿದೆ.
ಕೆಎಸ್ಆರ್ಟಿಸಿ ಬಸ್ ಮೂಡಿಗೆರೆ ಡಿಪೋಗೆ ಸೇರಿದ್ದು ಎಂದು ಮಾಹಿತಿ ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.