ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸುಳಿವು ನೀಡಿದ್ದಾರೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್ ಸಿ) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (ಕೆಟಿಆರ್ಸಿ) ರಚನೆಗೆ ಸರ್ಕಾರ ಮುಂದಾಗಿದೆ ಎಂಬ ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವರು, ಹಿಂದಿನ ಬಿಜೆಪಿ ಸರ್ಕಾರ ಸಂಸ್ಥೆಯನ್ನು ನಷ್ಟದಲ್ಲಿಟ್ಟು ಹೋಗಿದೆ. ಪರಿಣಾಮವಾಗಿ ದರ ಏರಿಕೆ ಅನಿವಾರ್ಯವಾಗಿದೆ ಎಂದಿದ್ದಾರೆ. ಆ ಮೂಲಕ ಟಿಕೆಟ್ ದರ ಏರಿಕೆಯ ಸುಳಿವು ನೀಡಿದ್ದಾರೆ.