News Karnataka Kannada
Friday, May 10 2024
ಬೆಂಗಳೂರು

ರಾಹುಲ್ ಗಾಂಧಿ ಅರ್ಜಿ ವಜಾ: ಬೆಂಗಳೂರಿನಲ್ಲಿ ಕಾಂಗ್ರೆಸ್ ಮೌನ ಪ್ರತಿಭಟನೆ

K'taka Cong
Photo Credit : IANS

ಬೆಂಗಳೂರು: ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಜುಲೈ 12) ದೇಶಾದ್ಯಂತ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಕಾಂಗ್ರೆಸ್ ಮೌನ​ ಪ್ರತಿಭಟನೆ ನಡೆಸುತ್ತಿದೆ. ಈಗಾಗಲೇ ನಡೆಸುತ್ತಿರುವ ಕಾಂಗ್ರೆಸ್​ ನಾಯಕರು ಆಗಮಿಸುತ್ತಿದ್ದು, ಸಚಿವರುಗಳಾದ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ. ಪ್ರತಿಭಟನೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಆಗಮಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಯುತ್ತಿದೆ.

ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಎಂದಿಗೂ ದೇಶದ ಪ್ರತಿಷ್ಠೆಗೆ ಧಕ್ಕೆ ತಂದಿಲ್ಲ. ಅವರು ಕರ್ನಾಟಕದಲ್ಲಿ ಮಾಡಿದ ಭಾಷಣದ ನೆಪದಲ್ಲಿ ಅವರ ರಾಜಕೀಯ ಜೀವನವನ್ನು ಕೊನೆಗೊಳಿಸುವ ಪಿತೂರಿ ನಡೆಯುತ್ತಿದೆ. “ನಾವು ಇದನ್ನು ಖಂಡಿಸುತ್ತೇವೆ. ಸತ್ಯ ಮತ್ತು ದೇಶಕ್ಕಾಗಿ ನಿಂತಿರುವ ರಾಹುಲ್ ಗಾಂಧಿ ಅವರೊಂದಿಗೆ ನಿಲ್ಲಲು ಪ್ರತಿಪಕ್ಷಗಳಿಗೆ ಮತ್ತು ದೇಶಾದ್ಯಂತ ಸಂದೇಶವನ್ನು ಕಳುಹಿಸಬೇಕಾಗಿದೆ” ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು