Bengaluru 22°C
Ad

ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ, ಬೊಮ್ಮಾಯಿ ರಾಜಿನಾಮೆ

ಲೋಕಸಭೆ ಆಯ್ಕೆಯಾದ ಹಿನ್ನಲೆಯಲ್ಲಿ ಸ್ಥಾನಕ್ಕೆ ಎಚ್‌. ಡಿ. ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ಶನಿವಾರ ರಾಜಿನಾಮೆ ಸಲ್ಲಿಸಿದರು. ವಿಧಾನಸೌಧದಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನೂ ಇಬ್ಬರೂ ಪ್ರತ್ಯೇಕವಾಗಿ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

ಬೆಂಗಳೂರು: ಲೋಕಸಭೆ ಆಯ್ಕೆಯಾದ ಹಿನ್ನಲೆಯಲ್ಲಿ ಸ್ಥಾನಕ್ಕೆ ಎಚ್‌. ಡಿ. ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ಶನಿವಾರ ರಾಜಿನಾಮೆ ಸಲ್ಲಿಸಿದರು. ವಿಧಾನಸೌಧದಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನೂ ಇಬ್ಬರೂ ಪ್ರತ್ಯೇಕವಾಗಿ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಇಂದು(ಜೂ.15) ಹೆಚ್​ಡಿ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು ನಂತರ ಶಿಗ್ಗಾವಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಕುಮಾರ್‌ಸ್ವಾಮಿ, ‘ಸಂಸದರಾಗಿ ಆಯ್ಕೆಯಾದ ಮೇಲೆ ಒಂದೇ ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ಬಸವರಾಜ ಬೊಮ್ಮಾಯಿ ಮಾತನಾಡಿ, ʻನಿರಂತರವಾಗಿ ನಾಲ್ಕು ಬಾರಿ ಶಾಸಕನಾಗಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟ ಶಿಗ್ಗಾವಿ ಕ್ಷೇತ್ರದ ಜನರಿಗೆ ಹೇಳುತ್ತೇವೆʼ ಎಂದರು.

Ad
Ad
Nk Channel Final 21 09 2023
Ad