ದೆಹಲಿ: ಮೂಡಾ ಮತ್ತು ವಾಲ್ಮೀಕಿ ಹಗರಣ ವಿರುದ್ಧವಾಗಿ ಬಿಜೆಪಿ ಹಮ್ಮಿಕೊಂಡಿದ್ದ ಪಾದಯಾತ್ರೆ ಕುರಿತಂತೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.
ಜೆ.ಟಿ ದೇವೆಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ಸದಸ್ಯರು ನಿರ್ಧಾರ ತೆಗೆದುಕೊಂಡಿದ್ದಾರೆ. ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೆಚ್ ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ.
ಕೇರಳದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದಿಂದ ಹೋದ ಜನರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದಾರೆ. ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಹಲವೆಡೆ ರೆಡ್, ಎಲ್ಲೋ ಅಲರ್ಟ್ ಘೋಷಿಸಿದೆ. ಹಲವು ಜಿಲ್ಲೆಗಳಲ್ಲಿ ಜಲಾವೃತಗೊಂಡು ಸಂಕಷ್ಟ ಎದುರಿಸುತ್ತಿದ್ದಾರೆ. ಮಂಡ್ಯ ಭಾಗದಲ್ಲಿ ಭತ್ತದ ಸಸಿ ನೆಡುವ ಕೆಲಸ ಶುರುವಾಲಿದೆ. ಈ ಹಿನ್ನಲೆ ನಮ್ಮ ನಾಯಕರು ಈ ನಿರ್ಧಾರಕ್ಕೆ ಬಂದಿದ್ದಾರೆ. ಪಾದಯಾತ್ರೆ ಮಾಡಬೇಕು ಎಂದು ಬಿಜೆಪಿ ನಾಯಕರು ಈ ಮುಂಚೆ ನಿರ್ಧಾರ ಮಾಡಿದ್ದರು. ನಮಗೆ ಮಾಹಿತಿಗಾಗಿ ಹೇಳಿದ್ದಾರೆ ಅಷ್ಟೇ. ಬಿಜೆಪಿ ನಿಲುವಿನಲ್ಲಿ ತಿರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಸೂಕ್ತವಾದ ಸಂದರ್ಭವಲ್ಲ ಅಂತಾ ನಾವು ಹಿಂದೆ ಸರಿದಿದ್ದೇವೆ ಎಂದು ಹೆಚ್ಡಿಕೆ ಹೇಳಿದ್ದಾರೆ.

