ಬೆಂಗಳೂರು: ವಿದೇಶದಿಂದ ಬೆಂಗಳೂರಿಗೆ ಮರಳುತ್ತಿದ್ದಂತೆಯೇ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.
ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಪರ್ಸೆಂಟೇಜ್ ನೀಡುವಂತೆ ಗುತ್ತಿಗೆದಾರರಿಗೆ ಹೇಳಿದ್ದಾರಂತೆ. ನಾನು ಯುರೋಪ್ ಪ್ರವಾಸದಲ್ಲಿದ್ದಾಗಲೇ ಕಮಿಷನ್ ಬಗ್ಗೆ ಮಾಹಿತಿ ಬಂತು ಎಂದು ಗಂಭೀರ ಆರೋಪ ಮಾಡಿದರು.
ಬೆಂಗಳೂರಿನಲ್ಲೇ ಪರ್ಸೆಂಟೇಜ್ ನೀಡಲು ಹೇಳಿದ್ದಾರಂತೆ. ಮಂತ್ರಿಗಳು, ಮಂತ್ರಿಗಳ ಚೇಲಾಗಳು ಕಮಿಷನ್ ಕೇಳುತ್ತಿದ್ದಾರಂತೆ. ಇಂತವರು ರಾಹುಲ್ ಮುಂದೆ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾತಾಡುತ್ತಾರಂತೆ. ಹೊರನೋಟಕ್ಕೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎನ್ನುತ್ತಾರೆ. ಆದರೆ ಕಾಂಗ್ರೆಸ್ ಸ್ವಾತಂತ್ರ್ಯ ಬಂದಾಗಿನಿಂದಲೂ ಅಧಿಕಾರ ನಡೆಸಿದೆ. ಅಂದಿನಿಂದಲೂ ವಸುಲಿಗಾಗಿಯೇ ಕಾಂಗ್ರೆಸ್ ಪಕ್ಷ ಇದೆ ಎಂದು ಕಿಡಿಕಾರಿದರು. ಈಸ್ಟ್ ಇಂಡಿಯಾ ಕಂಪನಿ ಕಾಂಗ್ರೆಸ್ಗೆ ಅಧಿಕಾರ ನೀಡಿ ಹೋಯ್ತು. ಈಸ್ಟ್ ಇಂಡಿಯಾ ಕಂಪನಿಯ ವಸೂಲಿಯನ್ನು ಕಾಂಗ್ರೆಸ್ ಮುಂದುವರಿಸಿದೆ ಎಂದರು.