ಆಗಸ್ಟ್ 4 ರಿಂದ ಸಿಲಿಕಾನ್ ಸಿಟಿಯಲ್ಲಿ ಲಾಲ್ ಬಾಗ್ ಫ್ಲವರ್ ಶೋ

ಬೆಂಗಳೂರು: ಬೆಂಗಳೂರಿನ ಹೂಗಳ ಹಬ್ಬ ಲಾಲ್ ಬಾಗ್ ಫವರ್​ ಶೋಗೆ ದಿನಾಂಕ ನಿಗದಿಯಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇದೇ ಆಗಸ್ಟ್ 4 ರಿಂದ ಫ್ಲವರ್ ಶೋ ಆರಂಭವಾಗಲಿದೆ. ಸ್ವಾತಂತ್ರೋತ್ಸವದ ಅಂಗವಾಗಿ ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನ ಇರಲಿದ್ದು ವಿಧಾನ ಸೌಧ ಹಾಗೂ ಕೆಂಗಲ್ ಹನುಮಂತಯ್ಯ ಅವರ ಕಾನ್ಸೆಪ್ಟ್ ಇರಲಿದೆ ಎಂದು ಲಾಲ್ ಬಾಗ್ ನಿರ್ದೇಶಕರಾದ ರಮೇಶ್ ತಿಳಿಸಿದ್ದಾರೆ.

ಲಾಲ್ ಬಾಗ್​ನ ನಿರ್ದೇಶಕರ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ರಮೇಶ್ ಅವರು, ಪ್ರತಿ ವರ್ಷದಂತೆ ಈ ಬಾರಿಯು ಫಲಪುಷ್ಪ ಪ್ರದರ್ಶನ ಆಯೋಜಿಸಿದ್ದೇವೆ. 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದೆ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಕಲೆಗಳ ಸಾರುವ ಕಾರ್ಯಕ್ರಮ ಆಯೋಜಿಸಿದ್ದೇವೆ . ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ. ಶಾಲಾ ಮಕ್ಕಳಿಗೆ ಪ್ರವೇಶ ಉಚಿತ. ಒಟ್ಟು ನಾಲ್ಕೂ ಗೇಟ್​ಗಳಲ್ಲಿ ಜನರಿಗೆ ಎಂಟ್ರಿ ಕೊಟ್ಟಿದ್ದೇವೆ. ಫ್ಲವರ್ ಶೋಗೆ ಎರಡೂವರೆ ಕೋಟಿಯಷ್ಟು ಹಣವನ್ನ ವ್ಯಾಯ ಮಾಡಲಾಗುತ್ತಿದೆ. ಈ ಬಾರಿ ಟಿಕೆಟ್ ದರ ಏನೂ ಜಾಸ್ತಿ ಮಾಡಿಲ್ಲ‌.

ವೀಕ್ ಡೇಸ್​ನಲ್ಲಿ ಹಿರಿಯರಿಗೆ 70 ರುಪಾಯಿ ಹಾಗೂ ಮಕ್ಕಳಿಗೆ 30 ರುಪಾಯಿ ನಿಗದಿ ಮಾಡಿದ್ದೇವೆ. 200 ಸಿಸಿ ಟಿವಿ ಕ್ಯಾಮರಾಗಳನ್ನ ಅಳವಡಿಕೆ ಮಾಡಿದ್ದೇವೆ. ಫ್ಲವರ್ ಶೋ ಗೆ ಕೊಲ್ಕತ್ತ, ಕೇರಳ, ತಮಿಳುನಾಡು, ಆಂಧ್ರ ಇತರ ರಾಜ್ಯಗಳಿಂದ ಹೂಗಳು ಬರುತ್ತಿದ್ದು ಒಟ್ಟು 15 ರಿಂದ 17 ಲಕ್ಷ ಹೂಗಳನ್ನ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

 

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

17 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

31 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

43 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

59 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago