News Karnataka Kannada
Sunday, May 05 2024
ಬೆಂಗಳೂರು

ಪ್ರತಿಪಕ್ಷದ ನಾಯಕನ ಸ್ಥಾನ ಆ.15 ರ ನಂತರ ತೀರ್ಮಾನ: ಬಸವರಾಜ ಬೊಮ್ಮಾಯಿ

basavaraj bommai
Photo Credit : News Kannada

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಅದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದೇನೆ ಎಂದರು.

ಲೋಕಸಭೆ ಚುನಾವಣೆ ಸಿದ್ದತೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಸರ್ಕಾರದ ವಿರುದ್ದ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡಿದ್ದೇವೆ. ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ಧ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಅವರು ಹೇಳಿದರು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು