ಬೆಂಗಳೂರು: ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭಕ್ಕೆ ಮುನ್ನವೇ ಬಿಜೆಪಿಯಿಂದ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಇದಕ್ಕಾಗಿ ಇಂದು ಮಧ್ಯಾಹ್ನ ನಂತ್ರ ಶಾಸಕಾಂಗ ಪಕ್ಷದ ಸಭೆ ಕೂಡ ಕರೆಯಲಾಗುತ್ತದೆ ಎನ್ನಲಾಗಿತ್ತು. ಆದ್ರೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತ್ರ, ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಲಾಗಿದೆ ಎಂದಿದ್ದಾರೆ.
ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆಗೆ ಈ ಕುರಿತು ನಾನು
ಸುದೀರ್ಘ ಚರ್ಚೆ ಮಾಡಿದ್ದೇನೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಅಮಿತ್ ಶಾ ನಾಳೆ ಈ ಕುರಿತು ತೀರ್ಮಾನ ಮಾಡುತ್ತಾರೆ. ನಾಳೆ ಎಲ್ಲವೂ ತೀರ್ಮಾನ ಆಗಲಿದೆ ಎಂಬುದಾಗಿ ತಿಳಿಸಿದ್ದಾರೆ.
ಇತ್ತ ವಿಧಾನಸಭೆಯಲ್ಲಿ, ವಿರೋಧ ಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡದಿರುವುದು ಬಿಜೆಪಿಯಲ್ಲಿನ ಗುಂಪುಗಾರಿಕೆಯನ್ನು ತೋರಿಸುತ್ತದೆ ಮತ್ತು ಅದೊಂದು ‘ಅತ್ಯಂತ ಅಶಿಸ್ತಿನ’ ರಾಜಕೀಯ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.