ಎನ್‌ ಡಿಎಯಿಂದ ಹೊರಬಂದು ಮತ್ತೆ ಬೆಂಬಲದ ಬಗ್ಗೆ ಮಾತನಾಡಲಿ: ಎಚ್‌ಡಿಕೆಗೆ ಶಿವಕುಮಾರ್‌ ಟಾಂಗ್‌

ಬೆಂಗಳೂರು: ಕುಮಾರಸ್ವಾಮಿ ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ  ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ’ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ಕುಮಾರಕೃಪಾ ಅತಿಥಿ ಗೃಹದ ಬಳಿ ಶನಿವಾರ ಕೇಳಿದಾಗ ಈ ರೀತಿ ಉತ್ತರಿಸಿದರು.
ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ.

ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ ಎಂದರು.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

14 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

38 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

53 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago