ಬೆಂಗಳೂರು: ಭಾರತದ ಪ್ರಗತಿಗೆ ಸಂಕಲ್ಪ ಮಾಡೋಣ – ಸಿಎಂ ಬೊಮ್ಮಾಯಿ ಕರೆ

ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ನಮ್ಮನ್ನು ಸಂವಿಧಾನಕ್ಕೆ ಸಮರ್ಪಣೆ ಮಾಡಿಕೊಂಡು ಸಂವಿಧಾನಬದ್ಧವಾಗಿ ನಡೆದು ಭಾರತದ ಪ್ರಗತಿಗೆ ಸಂಕಲ್ಪ ಮಾಡಿಕೊಳ್ಳುವ ದಿನ. ನಾವೆಲ್ಲಾರೂ ಆ ಸಂಕಲ್ಪವನ್ನು ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಅವರು ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ “ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಣರಾಜ್ಯೋತ್ಸವದ ಶುಭಾಶಯಗಳನ್ನು ನಾಡಿನ ಜನತೆಗೆ ತಿಳಿಸಿದ ಮುಖ್ಯಮಂತ್ರಿಗಳು ವಿಶ್ವಕ್ಕೇ ಭಾರತದ ವಿಸ್ತೃತವಾಗಿರುವ ಶಕ್ತಿ, ಭಾರತದ ಭವ್ಯ ಪರಂಪರೆ ಸದಾ ಕಾಲ ಪ್ರತ್ಯೇಕವಾಗಿ, ವಿಭಿನ್ನವಾಗಿ ಜಗತ್ತಿನಲ್ಲಿದೆ. ಆಧುನಿಕ, ಪ್ರಗತಿಪರವಾದ ಭಾರತ. ಮಾನವೀಯತೆಯ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಎಂಬ ಧ್ಯೇಯ ನುಡಿಯಿಂದ ಮುನ್ನಡೆಯುತ್ತಿದ್ದೇವೆ ಎಂದರು.

ರಾಜ್ಯದ ಎಂಟು ಜನರಿಗೆ ಪದ್ಮಪ್ರಶಸ್ತಿ: ನಮ್ಮ ಹೆಮ್ಮೆ

ರಾಜ್ಯದ ಎಸ್.ಎಂ.ಕೃಷ್ಣಾ ಅವರಿಗೆ ಪದ್ಮವಿಭೂಷಣ, ಸುಧಾಮೂರ್ತಿ, ಎಸ್.ಎಲ್.ಭೈರಪ್ಪ ಸೇರಿದಂತೆ ಒಟ್ಟು ಎಂಟು ಜನರಿಗೆ ಪದ್ಮಪ್ರಶಸ್ತಿಗಳು ಘೋಷಣೆಯಾಗಿವೆ. ಕಳೆದ ಹಲವಾರು ವರ್ಷಗಳಿಂದ ಪ್ರಧಾನಮಂತ್ರಿಗಳು, ಅವರವರ ವೃತ್ತಿಯಲ್ಲಿ ಶ್ರೇಷ್ಠತೆ ಕಂಡುಕೊಂಡವರು, ದೇಶಕ್ಕೆ ಕೊಡುಗೆ ನೀಡಿದವರು, ಯಾವ ಅಪೇಕ್ಷೆಯೂ ಇಲ್ಲದೆ ಎಲೆಮರೆಕಾಯಿಯಾಗಿ ಕೆಲಸ ಮಾಡಿದವರನ್ನು ಗುರುತಿಸಿ ಪದ್ಮಪ್ರಶಸ್ತಿಗಳನ್ನು ನೀಡುವ ವಿನೂತನ ಪದ್ಧತಿಯನ್ನು ಅಳವಡಿಸಿದ್ದಾರೆ. ಇದು ಅವರ ಕಾರ್ಯವೈಖರಿ. ಗುಣಾತ್ಮಕ ಕಾರ್ಯಕ್ಕೆ ಬೆಲೆ ನೀಡಿದ್ದಾರೆ.

ಕರ್ನಾಟಕಕ್ಕೆ ಎಂಟು ಪ್ರಶಸ್ತಿ ದೊರೆತಿರುವುದು ನಮ್ಮ ಹೆಮ್ಮೆ. ಕರ್ನಾಟಕದ ವಿಪುಲ ಮಾನವ ಪ್ರತಿಭೆಯನ್ನು ತೋರಿದಂತಾಗಿದೆ. ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಬಯಸುತ್ತೇನೆ. ಅವರಿಂದ ಇನ್ನಷ್ಟು ಜನರಿಗೆ ಪ್ರೇರಣೆ ದೊರೆಯುವ ಆಶಾಭಾವನೆ ಇದೆ ಎಂದರು.

Ashika S

Recent Posts

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

1 min ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

39 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

42 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

55 mins ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

56 mins ago

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

1 hour ago