Bengaluru 26°C

ತರಕಾರಿ ಮಾರಾಟಗಾರರಿಗೂ ಲೈಸನ್ಸ್ ಪಡೆಯುವುದು ಕಡ್ಡಾಯ!

ರಾಜಧಾನಿಯ ಹೋಟೆಲ್ ಹಾಗೂ ಮಾಲ್‌ಗಳಲ್ಲಿ ನೀಡಲಾಗುವ ಆಹಾರದಲ್ಲಿ ಕೃತಕ ಕಲರ್‌ ಹಾಗೂ ಕೆಮಿಕಲ್ ಬಳಕೆ ಮಾಡದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ರಾಜಧಾನಿಯ ಹೋಟೆಲ್ ಹಾಗೂ ಮಾಲ್‌ಗಳಲ್ಲಿ ನೀಡಲಾಗುವ ಆಹಾರದಲ್ಲಿ ಕೃತಕ ಕಲರ್‌ ಹಾಗೂ ಕೆಮಿಕಲ್ ಬಳಕೆ ಮಾಡದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ.


ಮಾಲ್‌ಗಳು ಹಾಗೂ ಹೋಟೆಲ್ ಮಾಲೀಕರ ಜೊತೆಗೆ ಸಭೆ ನಡೆಸಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಈ ಕುರಿತು ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿ ಆಹಾರದಲ್ಲೂ ಕಲರ್ ಬಳಕೆ, ರಾಸಾಯನಿಕ ಬಳಕೆ ಮಾಡಲಾಗುತ್ತಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತನಿಖೆ ಮಾಡಿದಾಗ ಮಾಲ್‌ಗಳಲ್ಲಿನ ಫುಡ್ ಕಳಪೆ ಎಂದು ಪತ್ತೆಯಾಗಿದೆ.


ಇದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಎಲ್ಲರೂ ಆಹಾರದಲ್ಲಿ ಶುಚಿತ್ವ ಕಾಪಾಡುವಂತೆ ಹಾಗೂ ಕಲರ್ ಮುಕ್ತ ಆಹಾರ ನೀಡುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ. ಇದರ ಜೊತೆಗೆ ತರಕಾರಿ ಮಾರಾಟಗಾರರಿಗೂ ಲೈಸನ್ಸ್ ಪಡೆಯುವುದು ಕಡ್ಡಾಯವಾಗಲಿದೆ. ಎಲ್ಲಾ ತರಕಾರಿ ವ್ಯಾಪಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಲೈಸೆನ್ಸ್ ಪಡೆಯಬೇಕು.


ತರಕಾರಿಗಳ ಸ್ಯಾಂಪಲ್‌ಗಳನ್ನು ಅಗತ್ಯ ಬಿದ್ದರೆ ಪರೀಕ್ಷೆ ನಡೆಸಬೇಕು. ತರಕಾರಿ- ಹಣ್ಣು ಮಾರುವಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಕೆಲವು ಕಡೆಗಳಲ್ಲಿ ಸಾವಯವ ತರಕಾರಿ ಮಾರುತ್ತೇವೆ ಎಂದು ಹೆಚ್ಚಿನ ದರದಲ್ಲಿ ಕಳಪೆ ತರಕಾರಿ ಹಣ್ಣುಗಳನ್ನು ಮಾರುತ್ತಿರುವುದು ಕಂಡುಬರುತ್ತಿದೆ. ಇದರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.


Nk Channel Final 21 09 2023