ಬೆಂಗಳೂರು: ಸರ್ಕಾರಿ ನೌಕರರು ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿಗೆ ಜಮೆ ಮಾಡುವ ಮೊತ್ತವನ್ನು 5 ಲಕ್ಷ ರೂಪಾಯಿಗೆ ಮಿತಿಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಜಿಪಿಎಫ್ ಮೊತ್ತದ ಮಿತಿ ನಿಗದಿಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. “ಉಲ್ಲೇಖ(1)ರ ಕೇಂದ್ರ ಸರ್ಕಾರದ ಅಧಿಸೂಚನೆ ಮತ್ತು ಅಧಿಕೃತ ಜ್ಞಾಪನಗಳಲ್ಲಿ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಮತ್ತು ಉಲ್ಲೇಖ(2)ರ ರಾಜ್ಯ ಸರ್ಕಾರದ ಆದೇಶದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ.
ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಈ ಮೂಲಕ ಸೂಚಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

