News Karnataka Kannada
Friday, May 10 2024
ಬೆಂಗಳೂರು

ಜನವರಿಗೆ ಮೊದಲೇ ಲೋಕಸಭೆ ಚುನಾವಣೆ ಕೈ ಅಭ್ಯರ್ಥಿಗಳ ಪಟ್ಟಿ: ಶಿವಕುಮಾರ್

List of candidates for Lok Sabha polls before January: Shivakumar
Photo Credit : News Kannada

ಬೆಂಗಳೂರು: ಲೋಕಸಭೆ ಚುನಾವಣೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್‌ ಮಹತ್ವದ ಹೇಳಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿ ಜನವರಿಗೂ ಮುನ್ನವೇ ಬಿಡುಗಡೆ ಮಾಡಿದರೆ ಆಶ್ಚರ್ಯವೇನಿಲ್ಲ, ಹತ್ತು ದಿನಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷದಿಂದ ರಾಜ್ಯ ಸರ್ಕಾರದ ಬಹುತೇಕ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ, 28 ಕ್ಷೇತ್ರಗಳಿಗೆ ತಲಾ ಒಬ್ಬರಂತೆ 28 ಸಚಿವರನ್ನು ನೇಮಿಸಲಾಗಿದೆ. ಅವರು ಎಂಟರಿಂದ ಹತ್ತು ದಿನಗಳಲ್ಲಿ ಎರಡು ಅಥವಾ ಮೂರು (ಅಭ್ಯರ್ಥಿಗಳ) ಹೆಸರುಗಳನ್ನು ನೀಡುತ್ತಾರೆ. ನಾವು ಸಾಧ್ಯವಾದಷ್ಟು ಬೇಗ ಪಟ್ಟಿಯನ್ನು ಅಂತಿಮಗೊಳಿಸುತ್ತೇವೆ ಎಂದರು.

ಮೂವರು ಡಿಸಿಎಂ ಹುದ್ದೆ ಕುರಿತು ಬಹಿರಂಗವಾಗಿ ಚರ್ಚೆ ನಡೆಸದಂತೆ ಕಾಂಗ್ರೆಸ್ ಕೈಕಮಾಂಡ್ ಪತ್ರ ಕುರಿತು ಹೇಳಿಕೆ ನೀಡಲು ಅವರು ನಿರಾಕರಿಸಿದರು.

2024 ರ ಲೋಕಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ವೀರಶೈವ-ಲಿಂಗಾಯತ, ಎಸ್‌ಸಿ/ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಂದ ತಲಾ ಒಬ್ಬರಂತೆ ಇನ್ನೂ ಮೂರು ಉಪಮುಖ್ಯಮಂತ್ರಿಗಳ ಅಗತ್ಯವಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಇತ್ತೀಚಿಗೆ ಹೇಳಿಕೆ ನೀಡಿದ್ದರು.

ಈ ವರ್ಷದ ಮೇನಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಮುಖ್ಯಮಂತ್ರಿ ಸ್ಥಾನಕ್ಕಾಗಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವಿನ ತೀವ್ರ ಪೈಪೋಟಿಯ ನಡುವೆ ಶಿವಕುಮಾರ್ ಏಕೈಕ ಉಪ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ನಿರ್ಧರಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು