ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ.ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಇಂದು (ಜು.22) ಸಾಂಕೇತಿಕವಾಗಿ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ಸರ್ಕಾರಕ್ಕೆ ಈ ಹಿಂದೆ ಹಲವು ಬಾರಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ-ಯುಕೆಜಿ ತರಗತಿ ಆರಂಭಿಸುವುದಕ್ಕೆ ಮನವಿ ಮಾಡಲಾಗಿತ್ತು. ಆದರೆ ಈ ಮನವಿಗೆ ಸರ್ಕಾರಗಳು ಪುರಸ್ಕರಿಸಿರಲಿಲ್ಲ. ಇದೀಗ ಕೊನೆಗೂ ಸರ್ಕಾರ ಮನವಿಗೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ.

