News Karnataka Kannada
Monday, April 29 2024
ಬೆಂಗಳೂರು

ಲೋಕಸಭಾ ಚುನಾವಣೆ: ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಕಾಂಗ್ರೆಸ್  ಸರ್ಕಾರದ ವಿರುದ್ಧ ಎಕ್ಸ್ ಖಾತೆಯಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ ಎಂದು ವ್ಯಂಗ್ಯವಾಡಿದೆ.
Photo Credit : NewsKarnataka

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಇದೀಗ ರಾಜ್ಯ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಅಲ್ಲದೇ ಈ ಬಾರಿ ಲೋಕಸಭಾ ಟಿಕೆಟ್ ನೀಡದೇ ಕೊಕ್ ನೀಡಲಾಗಿರುವ ನಾಯಕರುಗಳನ್ನು ಸ್ಟಾರ್ ಪ್ರಚಾರಕರನ್ನಾಗಿ ನೇಮಿಸಲಾಗಿದೆ. ಕೆಲ ಸಂಸದರು ಅಸಮಾಧಾನಗೊಂಡಿದ್ದಾರೆ. ಇನ್ನೂ ಕೆಲವರು ಟಿಕೆಟ್​ ಕೈತಪ್ಪಿದ ಬೇಸರಲ್ಲಿ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾರೆ. ಹೀಗಾಗಿ ಅಂತವರಿಗೆ ಬಿಜೆಪಿ ಸ್ಟಾರ್ ಪ್ರಚಾರಕರನ್ನಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಅತೃಪ್ತರನ್ನು ಮನವೊಲಿಸು ಪ್ರಯತ್ನ ಮಾಡಿದೆ.

ಇನ್ನು ಮೈಸೂರು ಅಭ್ಯರ್ಥಿ ಯದುವೀರ ಒಡೆಯರ್, ಮಂಡ್ಯ ಸಂಸದೆ ಸುಮಲತಾ ಮತ್ತು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಲ್ಲ.

ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಹೀಗಿದೆ: ನರೇಂದ್ರ ಮೋದಿ, ಜಗತ್ ಪ್ರಕಾಶ್ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಆರ್.ಅಶೋಕ್, ಕೆ.ಅಣ್ಣಾಮಲೈ, ರಾಧಾಮೋಹನ ದಾಸ್ ಅಗರ್ವಾಲ್, ಯೋಗಿ ಆದಿತ್ಯನಾಥ್, ಹಿಮಂತ್ ಬಿಸ್ವಾ ಶರ್ಮಾ, ಪ್ರಮೋದ್ ಸಾವಂತ್, ಫಡ್ನವಿಸ್, ಬಸವರಾಜ ಬೊಮ್ಮಾಯಿ, ಸುಧಾಕರ ರೆಡ್ಡಿ, ಸದಾನಂದಗೌಡ, ಜಗದೀಶ್ ಶೆಟ್ಟರ್, ನಳಿನ್ ಕುಮಾರ್ ಕಟೀಲು, ಸಿ.ಟಿ.ರವಿ, ಗೋವಿಂದ ಕಾರಜೋಳ, ಅಶ್ವತ್ಥ್ ನಾರಾಯಣ, ಬಿ.ಶ್ರೀರಾಮುಲು, ಅರವಿಂದ ಲಿಂಬಾವಳಿ, ವಿ.ಸುನೀಲ್ ಕುಮಾರ್, ಜಿ.ವಿ.ರಾಜೇಶ್, ಪಿ.ರಾಜೀವ್, ಪ್ರೀತಂಗೌಡ, ಬಸನಗೌಡ ಪಾಟೀಲ್ ಯತ್ನಾಳ್, ಭೈರತಿ ಬಸವರಾಜ್, ಪ್ರಮೋದ್ ಮಧ್ವರಾಜ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ, ಎನ್.ಮಹೇಶ್​ಗೆ ಸ್ಟಾರ್​ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ಟಿಕೆಟ್ ವಂಚಿತ ಹಾಲಿ ಸಂಸದರ ಪೈಕಿ ಡಿ.ವಿ. ಸದಾನಂದ ಗೌಡ, ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಮತ್ತು ಎ. ನಾರಾಯಣಸ್ವಾಮಿಗೆ ಅವಕಾಶ ನೀಡಲಾಗಿದೆ. ಮುಖ್ಯವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸ್ಟಾರ್ ಪ್ರಚಾರಕನ್ನಾಗಿ ನೇಮಕ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು