News Karnataka Kannada
Friday, May 10 2024
ಬೆಂಗಳೂರು

ರಾಜ್ಯದಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟರ ಸಂಪತ್ತು ಕಂಡು ಅಧಿಕಾರಿಗಳು ಶಾಕ್‌

Lokayukta raids in state: Officials shocked to see wealth of corrupt people
Photo Credit : Facebook

ಬೆಂಗಳೂರು: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಬುಧವಾರ ಬೆಳ್ಳಂಬೆಳಗ್ಗೆ ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ದಾಳಿ: ಬೆಳಗಾವಿ ನಗರದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಹೆಸ್ಕಾಂ ‌ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ದಾಳಿ ಮಾಡಲಾಗಿದೆ. ಸದ್ಯ ಶೇಖರ್ ಬಹುರೂಪಿ ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶೇಖರ್ ಬಹುರೂಪಿ ಅವರು 2019ರಲ್ಲಿ ಅಥಣಿಯಲ್ಲಿ ಕಾರ್ಯನಿರ್ವಹಿಸುವಾಗ ಪ್ರವಾಹದ ಸಂದರ್ಭದಲ್ಲಿ ನಡೆದ ಅವ್ಯವಹಾರ ಸಂಬಂಧ ಅಮಾನತುಗೊಂಡಿದ್ದರು.

ಬಾಗಲಕೋಟೆಯಲ್ಲಿ ದಾಳಿ: ಬಾಗಲಕೋಟೆಯಲ್ಲಿ ಸಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿದ್ಯಾಗಿರಿಯಲ್ಲಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಬೀಳಗಿ ಸಹಾಯಕ ನಿರ್ದೇಶಕ ಕೃಷ್ಣ ಶಿರೂರ ಮನೆಗಳಲ್ಲಿ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಪರಿಶೀಲಿಸಿದ್ದಾರೆ.

ತುಮಕೂರಿನಲ್ಲಿ ದಾಳಿ: ತುಮಕೂರು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಅವರ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಶಂಕರಪುರದಲ್ಲಿರುವ ನಿವಾಸ ಹಾಗೂ ರಾಮನಗರದ ಫಾರಂ ಹೌಸ್ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ. ತುಮಕೂರು ಕೃಷಿ ಇಲಾಖೆಯಲ್ಲಿ ಜೆಡಿ ಆಗಿ ಕೆಲಸ ನಿರ್ವಹಿಸುತ್ತಿರುವ ರವಿ, ಹಾಸನದಿಂದ ತುಮಕೂರಿಗೆ ವರ್ಗಾವಣೆಯಾಗಿದ್ದರು.

ಶಿವಮೊಗ್ಗ, ಚಾಮರಾಜನಗರದಲ್ಲಿ ಲೋಕಾಯುಕ್ತ ದಾಳಿ: ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಸೊರಬ ಪುರಸಭೆಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಸೊರಬ ಪುರಸಭೆಯ ಎಫ್ ಡಿಎ ಚಂದ್ರಕಲಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದವರಾಗಿದ್ದಾರೆ.

ಇ ಸ್ವತ್ತು ಮಾಡಿಕೊಡಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆ ಕಂದಾಯ ನಿರೀಕ್ಷಕ ಚಾಮರಾಜನಗರದಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ನಗರಸಭೆಯ ಕಂದಾಯ ನಿರೀಕ್ಷಕ ನಾರಾಯಣ್ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ.

ಕೋಲಾರ ನಗರದ ಹಲವೆಡೆ ಲೋಕಾಯುಕ್ತ ದಾಳಿ: ಕೆಆರ್‌ಡಿಎಲ್‌ ಎಇಇ ಕೋದಂಡರಾಮಯ್ಯ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರದ ಕುವೆಂಪು ನಗರದ ಮನೆ ಸೇರಿ ಐದು ಕಡೆ ದಾಳಿಯಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಕೋಲಾರ ಲೋಕಾಯುಕ್ತ ಎಸ್​​ಪಿ ಉಮೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ರಾಯಚೂರಿನಲ್ಲೂ ದಾಳಿ: ರಾಯಚೂರು ಜಿಲ್ಲೆ ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಸಿಂಧನೂರು ಪಟ್ಟಣದ ಕಚೇರಿ ಮತ್ತು ಮನೆ ಹಾಗೂ ಕಲಬುರಗಿಯ ನಾಗನಹಳ್ಳಿ-ಖಣದಾಳ ರಸ್ತೆಯಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು