ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕದ ಹಲವೆಡೆ ಇಂದು(ಸೋಮವಾರ) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ರಾಜ್ಯದ 17 ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳಿ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಚಿತ್ರದುರ್ಗ, ಹಾಸನ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ಇಂದು(ಅ.30) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಹಾಸನದಲ್ಲಿ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ H.E.ನಾರಾಯಣ ಎನ್ನುವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿಯ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿಯಾಗಿದೆ. ಹಾವೇರಿ RFO ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ RFO ಮಾಲತೇಶ್​ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.‌ ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮತ್ತು ದೇವದುರ್ಗದ KBJNL ಇಇ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ದಾಳಿಯಾಗಿದೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago