ಬೆಂಗಳೂರು: ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲು ಕಟ್ ಆದ ದಾರುಣ ಘಟನೆ ಬೆಂಗಳೂರಿನ ಬೊಮ್ಮಸಂದ್ರ ಫ್ಲೈಓವರ್ ಬಳಿ ನಡೆದಿದೆ. ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್‌ನಲ್ಲಿದ್ದ ಮಗು ಪಾರಾಗಿದೆ.ಇನ್ನು ಗಾಯಗೊಂಡಿದ್ದವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದು, ಇನ್ನು ಈ ಘಟನೆ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Ad