ಬೆಂಗಳೂರು : ತಾನು ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ ಕಾರಣದಿಂದ ಬೇಸತ್ತ ಯುವಕನೊಬ್ಬ ತನ್ನ ಜೀವನವನ್ನೇ ಅಂತ್ಯಗೊಳಿಸಿಕೊಂಡ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ನಲ್ಲಿ ನಡೆದಿದೆ.
ಪ್ರೀತಿಸಿದ ಯುವತಿ ತನಗೆ ದಕ್ಕುವುದಿಲ್ಲ ಎಂಬ ನೋವಿನಿಂದ ನೊಂದ ಪ್ರೇಮಿ ಅಭಿಷೇಕ್ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ ಎನ್ನಲಾಗಿದೆ. ಈ ಯುವಕ ಮತ್ತು ಯುವತಿ ಆರು ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದು, ಮದುವೆಯ ಪ್ರಸ್ತಾಪ ಬಂದಾಗ ಪೋಷಕರು ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವತಿ ಪ್ರೇಮಿಯನ್ನು ಮದುವೆಯಾಗಲು ನಿರಾಕರಿಸಿದ್ದಾಳೆ.
ಇದರಿಂದ ತೀವ್ರ ಬೇಸರಗೊಂಡ ಅಭಿಷೇಕ್, ಡೇಟ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

