ಬೆಂಗಳೂರು : ಬೆಂಗಳೂರು ವೈಯಾಲಿಕಾವಲ್ ನಿವಾಸಿ ಮಹಾಲಕ್ಷ್ಮೀ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಹಲವು ತಂಡಗಳನ್ನು ರಚಿಸಿಕೊಂಡು ಹುಡುಕಾಟ ನಡೆಸಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ಹೊರ ರಾಜ್ಯಗಳಲ್ಲಿ ಹುಡುಕಾಟ ನಡೆಸುತ್ತಿರುವಾಗಲೇ ಹಲವು ವಿಚಾರಗಳು ಬಹಿರಂಗಗೊಂಡಿವೆ.
ಮಹಾಲಕ್ಷ್ಮೀಯನ್ನು 50 ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇಟ್ಟು, ಆರೋಪಿ ಪರಾರಿಯಾಗಿದ್ದಾನೆ. ಕೊಲೆಯಾದ ಮಹಾಲಕ್ಷ್ಮೀ ಮನೆಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಆರೋಪಿಯ ಗುರುತಿಗಾಗಿ ಶೋಧ ನಡೆಸಿದಾಗ ಹಲವರ ಬೆರಳಚ್ಚು ಗುರುತು ಪತ್ತೆಯಾಗಿವೆ. ಈ ಮೂಲಕ, ಮಹಾಲಕ್ಷ್ಮೀಯನ್ನು ಹಲವರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂಬ ಅನುಮಾನ ಪೊಲೀಸರಿಗೆ ಮೂಡಿದೆ.
ಈ ನಡುವೆ ಮಹಾಲಕ್ಷ್ಮಿಯ ತಾಯಿ ಮೀನಾ ಕೊಟ್ಟಿರುವ ದೂರಿನಲ್ಲಿ ಹಲವು ಸಂಗತಿಗಳು ಬಯಲಾಗಿವೆ. ಮೀನಾ ಅವರಿಗೆ ನಾಲ್ವರು ಮಕ್ಕಳು. ಈ ಪೈಕಿ ಮೊದಲ ಮಗಳು ಲಕ್ಷ್ಮೀ. ಲಕ್ಷ್ಮೀ, ಸೈಯದ್ ಇಮ್ರಾನ್ ಎಂಬುವುರ ಜೊತೆ ಲವ್ ಮ್ಯಾರೇಜ್ ಆಗಿದ್ದು, ಶಾಹೀದಾ ಬುಷುರ ಅಂತ ಹೆಸರು ಬದಲಿಸಿಕೊಂಡಿದ್ದಾಳೆ.