ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.

ದೂರಿನಲ್ಲಿ ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು,‌ ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಉಲ್ಲೇಖ ಮಾಡಿದ್ದಾರೆ.

ಬ್ಯಾಂಕ್‌ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ. ಸದ್ಯ ವಿಶೇಷ ತನಿಖಾ ತಂಡ  ಈ ಕೇಸ್ ಸಿಬಿಐಗೆ ವರ್ಗಾವಣೆ ಆಗುವ‌ ಸಾಧ್ಯತೆ ಹೆಚ್ಚಿದೆ.

ಒಂದು ವೇಳೆ ರಾಜ್ಯ ಸರ್ಕಾರ ತನಿಖೆಯನ್ನು ಎಸ್ಐಟಿ ವರ್ಗಾವಣೆ ಮಾಡಲು ನಿರಾಕರಿಸಿದ್ದೆ ಆದಲ್ಲಿ ಸಿಬಿಐ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.