ಬೆಂಗಳೂರು: ಬೆಂಗಳೂರಿನ ಹಬ್ ಎಂದೇ ಕರೆಯಲ್ಪಡುವ ಎಲೆಕ್ಟ್ರಾನಿಕ್ ಸಿಟಿ ಹಂತ 1 ರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದ ತೀವ್ರತೆಗೆ ಇಡೀ ಪ್ರದೇಶವೇ ದಟ್ಟವಾದ ಕಪ್ಪು ಹೊಗೆಯಿಂದ ಆವೃತವಾಗಿದೆ.

ಬೆಂಕಿಯ ಜ್ವಾಲೆಗಳು ಎತ್ತರಕ್ಕೆ ಚಿಮ್ಮುತ್ತಿದ್ದು, ಸುತ್ತಮುತ್ತಲಿನ ಕಟ್ಟಡಗಳಿಗೂ ಹರಡುವ ಭೀತಿ ಮೂಡಿದೆ. ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಈ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.

ಆದರೆ, ಇದುವರೆಗೂ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಂತಹ ಪ್ರಮುಖ ಪ್ರದೇಶದಲ್ಲಿ ಇಂತಹ ಅವಘಡ ಸಂಭವಿಸಿರುವುದು ಭಾರಿ ಆತಂಕ ಮೂಡಿಸಿದೆ.

View this post on Instagram

A post shared by News Karnataka (@newskarnataka)