ತುಳುವನ್ನು 2ನೇ ಅಧಿಕೃತ ಭಾಷೆಯನ್ನಾಗಿ ಮಾಡಿ: ತುಳುವಿನಲ್ಲೆ ಸದನದಲ್ಲಿ ಚರ್ಚೆ

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿಂದು ತುಳು ಭಾಷೆ ಗಮನಸೆಳೆದಿದೆ. ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದ್ದಾರೆ. ತುಳು ಭಾಷೆಯಲ್ಲೇ ಮಾತನಾಡಿ ಅಶೋಕ್ ಕುಮಾರ್ ರೈ ಗಮನಸೆಳೆದಿದ್ದು, ಈ ವೇಳೆ ಸ್ಪೀಕರ್ ಯುಟಿ ಖಾದರ್ ತುಳು ಭಾಷೆಯಲ್ಲೇ ಅವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಶಾಸಕ ವೇದವ್ಯಾಸ್ ಕಾಮತ್ ತುಳುವಿನಲ್ಲಿ ಮಾತನಾಡಲು ಮುಂದಾದಾಗ ಕನ್ನಡದಲ್ಲಿ ಮಾತನಾಡಿ ಎಂದು ಸ್ಪೀಕರ್ ಖಾದರ್ ಸೂಚನೆ ನೀಡಿದ್ರು.

ಬಳಿಕ ಕನ್ನಡ ಹಾಗೂ ತುಳುವಿನಲ್ಲಿ ವೇದವ್ಯಾಸ್ ಕಾಮತ್ ಮಾತನಾಡಿದ್ದಾರೆ. ತುಳುವಿನಲ್ಲಿ ಮಾತನಾಡುವುದಕ್ಕೆ ವಿರೋಧ ಇಲ್ಲ. ಆದರೆ ಬರೆದುಕೊಳ್ಳುವವರಿಗೆ ಸಮಸ್ಯೆ ಆಗುತ್ತದೆ ಎಂದು ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಧ್ವನಿಯೆತ್ತಿದ್ದಾರೆ. ನೀವು ತುಳುವಿನಲ್ಲಿ ಮಾತನಾಡಿದರೆ ನಾನು ಅರ್ಥ ಆಗದೇ ಉತ್ತರ ಕೊಡುವುದು ಹೇಗೆ ಎಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.

ಈ ವೇಳೆ ಸ್ಪೀಕರ್ ಖಾದರ್ ಮಾತನಾಡಿ, ತುಳು ಮಾತನಾಡುವವರು ಎಲ್ಲರನ್ನೂ ಖುಷಿಯಾಗಿರಿಸುತ್ತಾರೆ. ನೀವು ಕಾನೂನು ಇಲಾಖೆ, ಎಲ್ಲಾ ಇಲಾಖೆಗಳ ವರದಿಗಳನ್ನು ತರಿಸಿಕೊಂಡು ತುಳು ಭಾಷೆಯನ್ನು 2ನೇ ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಿ ಎಂದು ಸಚಿವರಿಗೆ ಸೂಚಿಸಿದರು. ಆಗ ಶಿವರಾಜ್ ತಂಗಡಗಿ ಮಾತನಾಡಿ ವರದಿಗಳನ್ನು ತರಿಸಿಕೊಂಡು ಪರಿಶೀಲನೆ ಮಾಡುವುದಾಗಿ ಉತ್ತರಿಸಿದರು.

 

 

Ashitha S

Recent Posts

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

31 seconds ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

7 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

19 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

25 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

40 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

56 mins ago