ಬೆಂಗಳೂರು

ಇಂದು ಕನ್ನಡಿಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನ್ಮದಿನ

ಬೆಂಗಳೂರು: ಕನ್ನಡಿಗ, ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು (ಜುಲೈ 21) 81ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಖರ್ಗೆ ಜನ್ಮದಿನಕ್ಕೆ ಕಾಂಗ್ರೆಸ್, ಬಿಜೆಪಿ ಹಲವು ನಾಯಕರು ಶುಭಕೋರುತ್ತಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವರವಟ್ಟಿ ಎನ್ನುವ ಗ್ರಾಮದಲ್ಲಿ ಜುಲೈ 21, 1942ರಲ್ಲಿ ಜನಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೀಗ ಎಂಬತ್ತು ವರ್ಷ.

1972 ರಲ್ಲಿ ಅನಿರೀಕ್ಷಿತವಾಗಿ ಅಂದಿನ ಕಲಬುರಗಿ ಜಿಲ್ಲೆಯ ಗುರಮಠಕಲ್ ಎಸ್ಸಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಮೊದಲ ಪ್ರಯತ್ನದಲ್ಲಿಯೇ ಶಾಸಕರಾಗಿ ಆಯ್ಕೆಯಾಗಿದ್ದರು. 2008 ರಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಿಂದ ಸ್ಪರ್ಧಿಸಿ 9 ನೇ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದರು.

2014 ರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಸರ್ಕಾರದ ವಿರುದ್ದ ತಮ್ಮ ಮೊನಚಾದ ಮಾತುಗಳಿಂದ ತಿವಿದು, ಪ್ರತಿಪಕ್ಷದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದ್ದರು. ಇದೇ ಕಾರಣಕ್ಕೆ ಸೋನಿಯಾ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿಸಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ನೀಡಿದ್ದರು. ಇದೀಗ ಅವರು ಎಐಸಿಸಿ ಅಧ್ಯಕ್ಷ ಸ್ಥಾನವಹಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ.

‘ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಸುದೀರ್ಘ ಆರೋಗ್ಯ ಕೊಟ್ಟು ಕಾಪಾಡಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೂಡ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ‘ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಶ್ರಮ ಹಾಗೂ ಬದ್ಧತೆಯು ಎಂದಿಗೂ ನಮಗೆ ಸ್ಫೂರ್ತಿದಾಯಕವಾಗಿದೆ. ಉತ್ತಮ ಆರೋಗ್ಯ, ಪ್ರೀತಿ ತುಂಬಿದ ಜೀವನ ನಿಮ್ಮದಾಗಿರಲಿ ಎಂಬುದಾಗಿ ಆಶಿಸುತ್ತೇನೆ’ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮೂಲಕ ಶುಭಾಶಯ ಕೋರಿದ್ದಾರೆ.

Ashitha S

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

17 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

25 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

26 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

35 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

50 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

1 hour ago