News Karnataka Kannada
Tuesday, April 23 2024
Cricket
ಬೆಂಗಳೂರು

ಯುವಕರ ಫೋಟೋ ಬಳಸಿ ಯುವತಿಯರನ್ನು ಬಲೆಗೆ ಬೀಳಿಸುತ್ತಿದ್ದವನ ಬಂಧನ

ಸಾಮಾಜಿಕ ಜಾಲತಾಣ ಮತ್ತು ಮ್ಯಾಟ್ರಿಮೋನಿಯಲ್ ಸೈಟ್‌ಗಳ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
Photo Credit : News Kannada

ಬೆಂಗಳೂರು: ಸಾಮಾಜಿಕ ಜಾಲತಾಣ ಮತ್ತು ಮ್ಯಾಟ್ರಿಮೋನಿಯಲ್ ಸೈಟ್‌ಗಳ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಕಳೆದ ಇಪ್ಪತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ರಾಜಸ್ಥಾನ ಮೂಲದ ನರೇಶ್ ಪೂಜಾರಿ ಗೋಸ್ವಾಮಿ (45), ನಕಲಿ ಪ್ರೊಫೈಲ್‌ಗಳನ್ನು ಸೃಷ್ಟಿಸಿ ಮಹಿಳೆಯರು ಮತ್ತು ಅವರ ಪೋಷಕರಿಗೆ ಹಣ ನೀಡುವಂತೆ ಆಮಿಷವೊಡ್ಡುತ್ತಿದ್ದ. ಹೀಗೆ ೨೫೦ಕ್ಕೂ ಹೆಚ್ಚು ಜನರನ್ನು ವಂಚಿಸಿದ್ದ.

ತನಿಖೆಯ ಪ್ರಕಾರ ಈತ ವಿಧವೆಯರನ್ನು ಮತ್ತು ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು, ತಡರಾತ್ರಿ ಅವರಿಗೆ ಸಂದೇಶಗಳನ್ನು ಕಳಿಸುತ್ತ, ಮಾತನಾಡಿಸುತ್ತ ವಿಶ್ವಾಸ ಗಳಿಸಿ ಹಣ ನೀಡುವಂತೆ ಕೇಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸುಂದರ ಯುವಕರ ಫೋಟೋಗಳನ್ನು ಬಳಸಿಕೊಂಡು ಆನ್‌ಲೈನ್‌ನಲ್ಲಿ ಪ್ರೊಫೈಲ್ ರಚಿಸಿ ಕಸ್ಟಮ್ ಅಧಿಕಾರಿ ಮತ್ತು ಸಾಫ್ಟ್‌ವೇರ್ ಎಂಜಿನಿಯರ್ ಎಂದು ತನ್ನನ್ನು ತಾನು ಗುರುತಿಸಿಕೊಂಡ ಗೋಸ್ವಾಮಿ, ಸುಮಾರು 259 ಮಹಿಳೆಯರನ್ನು ವಂಚಿಸಿರುವುದು ತಿಳಿದುಬಂದಿದೆ. ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ಆಂಧ್ರಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ ನ ಮಹಿಳೆಯರನ್ನು ವಂಚಿಸಲು ಈತ ಬೇರೆ ನಕಲಿ ಹೆಸರಿನ ಸಿಮ್ ಕಾರ್ಡ್‌ಗಳನ್ನು ಬಳಸಿದ್ದಾನೆ ಎಂದು ಬೆಂಗಳೂರಿನ ರೈಲ್ವೆ ಡಿಐಜಿಪಿ ಡಾ ಎಸ್‌ಡಿ ಶರಣಪ್ಪ ತಿಳಿಸಿದ್ದಾರೆ.

ಕೊಯಮತ್ತೂರಿನ ಸಂತ್ರಸ್ತೆಯೊಬ್ಬ ನೀಡಿದ ದೂರಿನ ಆಧಾರದಲ್ಲಿ ಈತನಿಗಾಗಿ ಹುಡುಕಾಟ ಶುರುವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು