ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ವೆಗಾ ಸಿಟಿ ಮಾಲ್‌ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ನಡೆದಿದೆ.
ಕೂಡಲೇ ಅಲ್ಲಿದ್ದ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದಾರೆ. ಆದರೆ ನಾಲ್ಕನೇ ಮಹಡಿಯಿಂದ ಬಿದ್ದ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿತ್ತು. ತೀವ್ರ ರಕ್ತಸ್ರಾವವಾಗಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಮೈಕೋ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.