ಬೆಂಗಳೂರು: ನಮ್ಮ ಮೆಟ್ರೋ ಟ್ರ್ಯಾಕ್ಗೆ ಹಾರಿ 35 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸಂಜೆ 5.41ರ ಸುಮಾರಿಗೆ ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರ ಗುರುತು ಪತ್ತೆ ಆಗಿಲ್ಲ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿ ಟ್ರ್ಯಾಕ್ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ನಂತರ ಕೆಲಕಾಲ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಯಲಚೇನಹಳ್ಳಿ ಟೂ ನಾಗಸಂದ್ರ ಮಾತ್ರ ಮೆಟ್ರೋ ಸಂಚಾರವಿದ್ದು, ದೊಡ್ಡಕಲ್ಲಸಂದ್ರ ಟೂ ಸಿಲ್ಕ್ ಇನ್ಸ್ಟಿಟ್ಯೂಟ್ ಮೆಟ್ರೋ ಸಂಚಾರ ಸ್ಥಗಿತವಾಗಿದೆ.
Ad