ಫ್ಲೈಟ್ ನಲ್ಲಿ ಶೌಚಾಲಯಕ್ಕೆ ಹೋದಾಗ ಎಡವಟ್ಟು. . !

ಬೆಂಗಳೂರು: ವಿಮಾನದಲ್ಲಿ ಶೌಚಾಲಯಕ್ಕೆ ಹೋಗಿದ್ದ ಪ್ರಯಾಣಿಕರೊಬ್ಬರು ಫ್ಲೈಟ್ ಟಾಯ್ಲೆಟ್ ಡೋರ್ ಸ್ಟ್ರಕ್ ಆಗಿ ತಮ್ಮ ಇಡೀ ಪ್ರಯಾಣವನ್ನು ಶೌಚಾಲಯದಲ್ಲಿಯೇ ಕಳೆದ ಘಟನೆ ಸ್ಪೈಸ್ ಜೆಟ್ ನಲ್ಲಿ ನಡೆದಿದೆ. ಮುಂಬೈನಿಂದ ಬೆಂಗಳೂರಿಗೆ ಸ್ಪೈಸ್ ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು, ಮುಂಬೈನಲ್ಲಿ ಫ್ಲೈಟ್ ಟೇಕ್ ಆಫ್ ಆಗುತ್ತಿದ್ದಂತೆ ಟಾಯ್ಲೆಟ್ ಗೆ ಹೋಗಿದ್ದಾರೆ.

ಈ ವೇಳೆ ವಿಮಾನದ ಶೌಚಾಲಯದ ಬಾಗಿಲು ಒಳಗಿನಿಂದ ಟ್ರ್ಯಾಪ್ ಆಗಿದೆ. ಶೌಚಾಲಯದ ಒಳಗಡೆ ಸಿಲುಕಿದ ಪ್ರಯಾಣಿಕ ರಕ್ಷಣೆಗಾಗಿ ಸಿಬ್ಬಂದಿಗಳನ್ನು ಕೂಗಿಕೊಂಡಿದ್ದಾರೆ. ವಿಮಾನದ ಸಿಬ್ಬಂದಿಗಳು ಟಾಯ್ಲೆಟ್ ಡೋರ್ ತೆಗೆಯಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಸ್ಪೈಸ್ ಜೆಟ್ SG-268 ವಿಮಾನ ಸೋಮವಾರ ರಾತ್ರಿ 10:20ಕ್ಕೆ ಮುಂಬೈನಿಂದ ಬೆಂಗಳೂರಿಗೆ ಹೊರಟಿತ್ತು.

ಇನ್ನು ಗಗನಸಖಿಯೊಬ್ಬರು ತಾವು ಟಾಯ್ಲೆಟ್ ಬಾಗಿಲು ತೆರೆಯಲು ಪ್ರಯತ್ನಿಸುತ್ತಿದ್ದೇವೆ ಆದರೆ ಸಾಧ್ಯವಾಗುತ್ತಿಲ್ಲ. ಹೆದರಬೇಡಿ ಎಂದು ಬ್ರೌನ್ ಪೇಪರ್ ನಲ್ಲಿ ಬರೆದು ಶೌಚಾಲಯದ ಒಳಗಿದ್ದ ಪ್ರಯಾಣಿಕನಿಗೆ ಧೈರ್ಯ ತುಂಬಿದ್ದಾರೆ.

ವಿಮಾನ ಮಂಗಳವಾರ ತಡ ರಾತ್ರಿ 3:42ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ತಕ್ಷಣ ವಿಮಾನದ ಇಂಜಿನಿಯರ್ ಗಳು ಧಾವಿಸಿ ಬಂದು ವಿಮಾನದ ಟಾಯ್ಲೆಟ್ ಡೋರ್ ಒಡೆದು ಪ್ರಯಾಣಿಕನನ್ನು ರಕ್ಷಿಸಿದ್ದಾರೆ. ಬಳಿಕ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

Ashitha S

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

19 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

37 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

50 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago