News Karnataka Kannada
Friday, April 19 2024
Cricket
ಬೆಂಗಳೂರು

ತಂದೆಯ ಮೊಬೈಲ್ ಕದ್ದವನನ್ನು ಗೂಗಲ್‌ ಮ್ಯಾಪ್ ಸಹಾಯದಿಂದ ಹಿಡಿದ ಮಗ

ರೈಲಿನಲ್ಲಿ ತಂದೆಯ ಬ್ಯಾಗ್ ಹಾಗೂ ಮೊಬೈಲ್ ಕದ್ದೊಯ್ದಿದ್ದ ಕಳ್ಳನೊಬ್ಬನನ್ನು ಮೊಬೈಲ್ ಕಳೆದುಕೊಂಡವರ ಮಗ, ಗೂಗಲ್ ಮ್ಯಾಪ್  ಸಹಾಯದಿಂದ ಪತ್ತೆಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡಿನ ರಾಜಭಗತ್ ಪಳನಿಸ್ವಾಮಿ ಎಂಬ ಟೆಕಿ ಈ ಕೆಲಸ ಮಾಡಿದವರು. ರಾಜಭಗತ್ ಅವರ ತಂದೆ ಕಳೆದ ಭಾನುವಾರ ತಮಿಳುನಾಡಿನ ಕನ್ಯಾಕುಮಾರಿ ಬಳಿ ನಾಗರ್‌ಕೋಯಿಲ್‌ನಿಂದ ಕಾಚಿಗುಡ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ತಿರುಚನಾಪಳ್ಳಿಗೆ ತೆರಳುತ್ತಿದ್ದರು. ಬೆಳಿಗ್ಗೆ 1.15ರ ಸುಮಾರು ನಾಗರ್‌ಕೋಯಿಲ್‌ನಲ್ಲಿ ರೈಲು ಹತ್ತಿದ್ದರು.
Photo Credit : News Kannada

ಬೆಂಗಳೂರು: ರೈಲಿನಲ್ಲಿ ತಂದೆಯ ಬ್ಯಾಗ್ ಹಾಗೂ ಮೊಬೈಲ್ ಕದ್ದೊಯ್ದಿದ್ದ ಕಳ್ಳನೊಬ್ಬನನ್ನು ಮೊಬೈಲ್ ಕಳೆದುಕೊಂಡವರ ಮಗ, ಗೂಗಲ್ ಮ್ಯಾಪ್  ಸಹಾಯದಿಂದ ಪತ್ತೆಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡಿನ ರಾಜಭಗತ್ ಪಳನಿಸ್ವಾಮಿ ಎಂಬ ಟೆಕಿ ಈ ಕೆಲಸ ಮಾಡಿದವರು. ರಾಜಭಗತ್ ಅವರ ತಂದೆ ಕಳೆದ ಭಾನುವಾರ ತಮಿಳುನಾಡಿನ ಕನ್ಯಾಕುಮಾರಿ ಬಳಿ ನಾಗರ್‌ಕೋಯಿಲ್‌ನಿಂದ ಕಾಚಿಗುಡ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ತಿರುಚನಾಪಳ್ಳಿಗೆ ತೆರಳುತ್ತಿದ್ದರು. ಬೆಳಿಗ್ಗೆ 1.15ರ ಸುಮಾರು ನಾಗರ್‌ಕೋಯಿಲ್‌ನಲ್ಲಿ ರೈಲು ಹತ್ತಿದ್ದರು.

ಬೆಳಗಿನ ಜಾವ  ತಿರುನಲ್ವೇಲಿ ಜಂಕ್ಸನ್‌ನಲ್ಲಿ ರಾಜಭಗತ್ ಅವರ ತಂದೆ ಫೋನ್ ಹಾಗೂ ಬ್ಯಾಗ್ ಕಳೆದುಕೊಂಡಿದ್ದರು. ಈ ವಿಷಯವನ್ನು ಅವರು ಬೇರೊಬ್ಬರ ಮೊಬೈಲ್‌ ಸಹಾಯದಿಂದ ಮಗ ರಾಜಭಗತ್‌ಗೆ ತಿಳಿಸಿದ್ದರು.

ಕೂಡಲೇ ಎಚ್ಚೆತ್ತುಕೊಂಡ ರಾಜಭಗತ್, ಗೂಗಲ್ ಮ್ಯಾಪ್ ಸಹಾಯದಿಂದ ತಂದೆಯ ಮೊಬೈಲ್ ಅನ್ನು ಟ್ರ್ಯಾಕ್ ಮಾಡಿದ್ದಾರೆ. ಕಳ್ಳ ಫೋನ್ ಹಾಗೂ ಬ್ಯಾಗ್ ಎತ್ತಿಕೊಂಡು ತಿರುನಲ್ವೇಲಿ ನಿಲ್ದಾಣದಲ್ಲಿ ಇಳಿದು ವಾಪಸ್ ನಾಗರ್‌ಕೋಯಿಲ್‌ಗೆ ಇನ್ನೊಂದು ರೈಲಿನಲ್ಲಿ ತೆರಳುತ್ತಿದ್ದ.

ಕೂಡಲೇ ತಿರುಚನಾಪಳ್ಳಿಯಿಂದ ನಾಗರ್‌ಕೋಯಿಲ್‌ಗೆ ತೆರಳಿದ ರಾಜಭಗತ್ ಅವರು, ರೈಲ್ವೆ ಪೊಲೀಸರ ಹಾಗೂ ಅಲ್ಲಿನ ಸ್ಥಳೀಯ ಸ್ನೇಹಿತನ ಸಹಾಯದಿಂದ ಗೂಗಲ್ ಮ್ಯಾಪ್ ಆಧರಿಸಿ ಕಳ್ಳನ ಬೆನ್ನು ಬಿದ್ದರು. ನಾಗರ್‌ಕೋಯಿಲ್ ರೈಲು ನಿಲ್ದಾಣದಲ್ಲಿ ಕಳ್ಳ ಇನ್ನೇನು ಸಿಕ್ಕಿಬಿದ್ದ ಅನ್ನುವಷ್ಟರಲ್ಲಿ ಹೆಚ್ಚಿನ ಜನಸಂದಣಿ ಇದ್ದಿದ್ದರಿಂದ ಆತ ಬಸ್ ಹತ್ತಿ ಹೋಗಿದ್ದ. ಮತ್ತೆ ಬೆನ್ನು ಬಿದ್ದ ರಾಜಭಗತ್, ‘ಅಣ್ಣಾ ಬಸ್ ನಿಲ್ದಾಣ’ದ ಬಳಿ ಹೋದಾಗ ಕಳ್ಳ ಸಿಕ್ಕಿ ಬಿದ್ದ.

ಕೂಡಲೇ ರಾಜಭಗತ್ ಅವರು ಸ್ಥಳೀಯರ ನೆರವಿನಿಂದ ಕಳ್ಳನನ್ನು ಹಿಡಿದು ಪರಿಶೀಲಿಸಿದಾಗ ಅವರ ತಂದೆಯ ಮೊಬೈಲ್ ಹಾಗೂ ಬ್ಯಾಗ್ ಮತ್ತು ಬ್ಯಾಗ್‌ನಲ್ಲಿದ್ದ ₹1000 ಸಿಕ್ಕಿತು.

ಈ ವಿಷಯವನ್ನು ರಾಜಭಗತ್ ಅವರು ತಮ್ಮ X ಖಾತೆಯಲ್ಲಿ ವಿವರವಾಗಿ ಹಂಚಿಕೊಂಡಿದ್ದು ಗೂಗಲ್ ಮ್ಯಾಪ್‌ಗೆ ಧನ್ಯವಾದ ಸಲ್ಲಿಸಿದ್ದಾರೆ. ಅವರು ಕಳ್ಳನ ವಿರುದ್ಧ ದೂರು ದಾಖಲಿಸಿ ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು