ನಾಳೆ ಡಾ.ರಾಜ್ ಕುಮಾರ್ ಹುಟ್ಟುಹಬ್ಬ : ರಕ್ತದಾನ, ಕಣ್ಣುದಾನ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮ

ಬೆಂಗಳೂರು: ನಾಳೆ ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ನಾನಾ ರೀತಿಯ ಸಿದ್ಧತೆಯನ್ನು ಅಭಿಮಾನಿಗಳು ಮಾಡಿಕೊಳ್ಳುತ್ತಿದ್ದಾರೆ.

ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಈ ಎಲ್ಲ ಕೆಲಸಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲೇ ನಡೆಯಲಿದೆ.

ಇವುಗಳ ಜೊತೆಗೆ ರಾಜ್ಯಾದ್ಯಂತ ಡಾ.ರಾಜ್ ಅಭಿಮಾನಿಗಳು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಅನ್ನ ಸಂತರ್ಪನೆ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿದ್ದಾರೆ.

Chaitra Kulal

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

11 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

27 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

42 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago