ಏಳು ವರ್ಷಗಳ ನಂತರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ

ಬೆಂಗಳೂರು: ಅಂತರ್ಜಲ ಕುಸಿತ, ಮಳೆ ಬಾರದೆ ಇರುವ ಕಾರಣದಿಂದಾಗಿ ಏಳು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಬಿಸಿಲು 36% ದಾಟಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ದಾಖಲೆಯ ತಾಪಮಾನದಲ್ಲಿ ಉಷ್ನಾಂಶ ಏರಿಕೆಯಾಗಿದೆ.

ಏಳು ವರ್ಷಗಳ ಬಳಿಕ ನಿನ್ನೆ 37.9% ಸೆಲ್ಸಿಯಸ್ ದಾಖಲಾಗಿದೆ. ಇಂದು 36.56% ಸೆಲ್ಸಿಯಸ್ ದಾಖಲಾಗಿದೆ. ಸಾಮಾನ್ಯವಾಗಿ ಏಪ್ರಿಲ್‌ನಲ್ಲಿ ಈ ತಾಪಮಾನ ದಾಖಲಾಗುತ್ತಿತ್ತು. ಆದರೆ ಈಗ ಮಾರ್ಚ್‌ನಲ್ಲಿಯೇ ಬಿಸಿಲಿನ ತೀವ್ರತೆ ಬಹಳಷ್ಟು ಹೆಚ್ಚಾಗಿದೆ.  ಮಳೆ ಕೊರತೆ ಮತ್ತು ಅಂತರ್ಜಲ ಕುಸಿತದಿಂದ ಈ ರೀತಿ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಹೊರತುಪಡಿಸಿದರೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ 35 ರಿಂದ 40% ಸೆಲ್ಸಿಯಸ್ ತಾಪಮಾನ ಹೆಚ್ಚಾಗುತ್ತಿದೆ. ಮೇ ಅಂತ್ಯದ ವರೆಗೂ ಇರಲಿದೆ. ಮೇ ವರೆಗೂ ಇದೇ ರೀತಿಯ ಬಿಸಿಲು ಇರಲಿದ್ದು, ಏಪ್ರಿಲ್ ಎರಡನೇ ವಾರದಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಹೆಚ್ಚಿನ ತಾಪಮಾನದಿಂದ ಆರೋಗ್ಯ ಸಮಸ್ಯೆ

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ.

Chaitra Kulal

Recent Posts

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

13 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

26 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

36 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

9 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

9 hours ago