ಬೆಂಗಳೂರು : ರಾಜ್ಯದೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಜೋರಾಗಿದ್ದು, ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯಂದು ಬುಧವಾರ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ.
ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳು ಎರಡೂ ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪ್ಲಾಸ್ಟರ್ ಆಫ್ ಪ್ಯಾರೀಸ್ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ.

