ಬೆಂಗಳೂರು : ಫೆ.1ರಿಂದ 14ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ-2025 ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜ.23ರಿಂದ ಫೆ.17ರವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಯಲಹಂಕ ವಲಯ ಜಂಟಿ ಆಯುಕ್ತ ಮೊಹದ್ ನಯೀಮ್ ಮೊಮಿನ್ ಅವರು ತಿಳಿಸಿದ್ದಾರೆ.
ಇದಲ್ಲದೇ ನಿಗದಿತ ದಿನಾಂಕಗಳಲ್ಲಿ ಯಲಹಂಕ ವಲಯದ ಏರ್‌ಪೋರ್ಸ್ ಸ್ಟೇಷನಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಂಸ ಮಾರಾಟದ ಉದ್ದಿಮೆಗಳನ್ನು ಮುಚ್ಚುವುದು, ಹೋಟೆಲ್ ಮತ್ತು ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ, ಮಾರಾಟವನ್ನು ನಿಷೇಧಿಸಲಾಗಿದೆ.
ನಿಯಮ ಮೀರುವವರ ವಿರುದ್ಧ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ರ ರೂಲ್ 91 ರಂತೆ ಕಾನೂನು ಕ್ರಮಕೈಗೊಳ್ಳುವುದಾಗಿ ಎಂದು ಹೇಳಿದ್ದಾರೆ. ಈಗಾಗಲೇ ಫೆ.1ರಿಂದ ಫೆ.14ರವರೆಗೆ ವೈಮಾನಿಕ ಪ್ರದರ್ಶನದ ನಿಮಿತ್ತ 10 ಕಿ.ಮೀ.ವ್ಯಾಪ್ತಿಯಲ್ಲಿ ಕ್ರೇನ್ ಬಳಸಿ ಎತ್ತರದ ಕಟ್ಟಗಳ ನಿರ್ಮಾಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿ ಬಿಬಿಎಂಪಿ ಆದೇಶಿಸಿತ್ತು. ಹೆಚ್ಚಿನ ಮಾಹಿತಿಗೆ ಯಲಹಂಕ ವಲಯದ ಪಶುಪಾಲನಾ ವಿಭಾಗ ಮೊಬೈಲ್ ಸಂಖ್ಯೆ-9845588227ಕ್ಕೆ ಸಂಪರ್ಕಿಸಿ.