Bengaluru 23°C
Ad

ಎಕ್ಸಾಮ್‌ ನಂತರ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

ಎಕ್ಸಾಮ್‌ ನಂತರ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ಮೊದಲನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ.

ಬೆಂಗಳೂರು: ಎಕ್ಸಾಮ್‌ ನಂತರ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ಮೊದಲನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ.

ಸೋಮವಾರ ಬೆಳಗ್ಗೆ ಪ್ರಾಕ್ಟಿಕಲ್ ಎಕ್ಸಾಂಗೆ ಹಾಜರಾಗಿ ಬಿದ್ದಿದ್ದ ವಿದ್ಯಾರ್ಥಿ ಬಳಿಕ ಮಧ್ಯಾಹ್ನ ಹಾಸ್ಟೆಲ್‌ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಠಡಿಯ ರೂಂ ಲಾಕ್ ಮಾಡಿಕೊಂಡು ರಾಜಸ್ಥಾನ ಮೂಲದ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿ ಆತ್ಮಹತ್ಯೆ ಸಂಬಂಧ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

Ad
Ad
Nk Channel Final 21 09 2023
Ad