News Karnataka Kannada
Friday, May 03 2024
ಬೆಂಗಳೂರು

ವೈದ್ಯಕೀಯ 49 ವಿದ್ಯಾರ್ಥಿನಿಯರು ಅಸ್ವಸ್ಥ ಪ್ರಕರಣ : ಇಬ್ಬರಿಗೆ ಪಾಸಿಟೀವ್‌

ನಗರದ ವೈದ್ಯಕೀಯ ಕಾಲೇಜಿನ 49 ಹಾಸ್ಟೆಲ್‌ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಪ್ರಕರಣದಲ್ಲಿ, ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್‌ ಇರುವುದು ಪತ್ತೆಯಾಗಿದೆ. ಈ ಕುರಿತು ಹಾಸ್ಟೆಲ್‌ ಅವ್ಯವಸ್ಥೆ ತನಿಖೆಗಾಗಿ ಸಮಿತಿಯೊಂದನ್ನು ರಚಿಸಲಾಗಿದೆ. ಹಾಲಿ ಹಾಸ್ಟೆಲ್‌ನ ಕಿಚನ್ ಅನ್ನು ಸೀಝ್ ಮಾಡಲಾಗಿದೆ
Photo Credit : NewsKarnataka

ಬೆಂಗಳೂರು : ನಗರದ ವೈದ್ಯಕೀಯ ಕಾಲೇಜಿನ 49 ಹಾಸ್ಟೆಲ್‌ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಪ್ರಕರಣದಲ್ಲಿ, ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್‌ ಇರುವುದು ಪತ್ತೆಯಾಗಿದೆ. ಈ ಕುರಿತು ಹಾಸ್ಟೆಲ್‌ ಅವ್ಯವಸ್ಥೆ ತನಿಖೆಗಾಗಿ ಸಮಿತಿಯೊಂದನ್ನು ರಚಿಸಲಾಗಿದೆ. ಹಾಲಿ ಹಾಸ್ಟೆಲ್‌ನ ಕಿಚನ್ ಅನ್ನು ಸೀಝ್ ಮಾಡಲಾಗಿದೆ.

49 ವೈದ್ಯಕೀಯ ವಿದ್ಯಾರ್ಥಿಗಳು ನಿನ್ನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದರು. 49 ವಿದ್ಯಾರ್ಥಿನಿಯರಲ್ಲಿ 26 ವರ್ಷದ ಫ್ರಫುಲ್ಲ ಎಂಬಾಕೆಯ ಬ್ಲಡ್ ಸ್ಯಾಂಪಲ್‌ನಲ್ಲಿ ಕಾಲರಾ ಪಾಸಿಟಿವ್ ಪತ್ತೆಯಾಗಿದೆ. ಇನ್ನೊಬ್ಬರ ಹೆಸರು ಗೊತ್ತಾಗಿಲ್ಲ.

ಇನ್ನು ಉಳಿದ ವಿದ್ಯಾರ‍್ಥಿನಿಯರ ರಕ್ತವನ್ನು ಸಾಂಪಲ್‌ ಟೆಸ್ಟ್‌ಗೆ ಕಳುಹಿಸಿದ್ದು ಇನ್ನು ಎರಡು ದಿನಗಳಲ್ಲಿ ರಿಪೋರ್ಟ್‌ ಬಾರುವುದಾಗಿ ಮಾಹಿತಿ ನೀಡಿದ್ದಾರೆ.

ಕರಣದ ಬಳಿಕ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಎಚ್ಚೆತ್ತಿದ್ದು, ಹಾಸ್ಟೆಲ್‌ನ ಕುಡಿಯುವ ನೀರನ್ನು ಪರಿಶೀಲಿಸಲು ಸೂಚನೆ ನೀಡಲಾಗಿದೆ. ಇಂಜಿನಿಯರ್‌ಗಳಿಂದ ನೀರಿನ ಪರೀಕ್ಷೆ ಮಾಡಿಸುತ್ತಿದ್ದು, ನೀರು ಕಲುಷಿತಗೊಂಡಿದ್ದು ಅದರಿಂದ ಸಮಸ್ಯೆ ಆಗಿದ್ದರೆ ಮುಂದಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು