ವೈದ್ಯಕೀಯ 49 ವಿದ್ಯಾರ್ಥಿನಿಯರು ಅಸ್ವಸ್ಥ ಪ್ರಕರಣ : ಇಬ್ಬರಿಗೆ ಪಾಸಿಟೀವ್‌

ಬೆಂಗಳೂರು : ನಗರದ ವೈದ್ಯಕೀಯ ಕಾಲೇಜಿನ 49 ಹಾಸ್ಟೆಲ್‌ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಪ್ರಕರಣದಲ್ಲಿ, ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್‌ ಇರುವುದು ಪತ್ತೆಯಾಗಿದೆ. ಈ ಕುರಿತು ಹಾಸ್ಟೆಲ್‌ ಅವ್ಯವಸ್ಥೆ ತನಿಖೆಗಾಗಿ ಸಮಿತಿಯೊಂದನ್ನು ರಚಿಸಲಾಗಿದೆ. ಹಾಲಿ ಹಾಸ್ಟೆಲ್‌ನ ಕಿಚನ್ ಅನ್ನು ಸೀಝ್ ಮಾಡಲಾಗಿದೆ.

49 ವೈದ್ಯಕೀಯ ವಿದ್ಯಾರ್ಥಿಗಳು ನಿನ್ನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದರು. 49 ವಿದ್ಯಾರ್ಥಿನಿಯರಲ್ಲಿ 26 ವರ್ಷದ ಫ್ರಫುಲ್ಲ ಎಂಬಾಕೆಯ ಬ್ಲಡ್ ಸ್ಯಾಂಪಲ್‌ನಲ್ಲಿ ಕಾಲರಾ ಪಾಸಿಟಿವ್ ಪತ್ತೆಯಾಗಿದೆ. ಇನ್ನೊಬ್ಬರ ಹೆಸರು ಗೊತ್ತಾಗಿಲ್ಲ.

ಇನ್ನು ಉಳಿದ ವಿದ್ಯಾರ‍್ಥಿನಿಯರ ರಕ್ತವನ್ನು ಸಾಂಪಲ್‌ ಟೆಸ್ಟ್‌ಗೆ ಕಳುಹಿಸಿದ್ದು ಇನ್ನು ಎರಡು ದಿನಗಳಲ್ಲಿ ರಿಪೋರ್ಟ್‌ ಬಾರುವುದಾಗಿ ಮಾಹಿತಿ ನೀಡಿದ್ದಾರೆ.

ಕರಣದ ಬಳಿಕ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಎಚ್ಚೆತ್ತಿದ್ದು, ಹಾಸ್ಟೆಲ್‌ನ ಕುಡಿಯುವ ನೀರನ್ನು ಪರಿಶೀಲಿಸಲು ಸೂಚನೆ ನೀಡಲಾಗಿದೆ. ಇಂಜಿನಿಯರ್‌ಗಳಿಂದ ನೀರಿನ ಪರೀಕ್ಷೆ ಮಾಡಿಸುತ್ತಿದ್ದು, ನೀರು ಕಲುಷಿತಗೊಂಡಿದ್ದು ಅದರಿಂದ ಸಮಸ್ಯೆ ಆಗಿದ್ದರೆ ಮುಂದಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

Nisarga K

Recent Posts

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

3 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

15 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

27 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

31 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

45 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

1 hour ago