Bengaluru 27°C

ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

ಮೆಟ್ರೋ ತನ್ನ ಪ್ರಯಾಣಿಕರಿಗೆ ಮಹತ್ವದ ಸಂದೇಶ ನೀಡಿದ್ದು , ಕೆಲವು ದಿನಗಳ ಕಾಲ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆ ಹೊರಡಿಸಿದೆ. ಈ ಮೂಲಕ ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣದ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು:  ಮೆಟ್ರೋ ತನ್ನ ಪ್ರಯಾಣಿಕರಿಗೆ ಮಹತ್ವದ ಸಂದೇಶ ನೀಡಿದ್ದು , ಕೆಲವು ದಿನಗಳ ಕಾಲ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆ ಹೊರಡಿಸಿದೆ. ಈ ಮೂಲಕ ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣದ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.


ಸೆಪ್ಟೆಂಬರ್‌ 11ರವರೆಗೆ ರೈಲು ಓಡಾಟ ಬಂದ್‌

ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಆಗಸ್ಟ್‌ 20, 23, 30 ರಂದು ಹಾಗೂ ಸೆಪ್ಟೆಂಬರ್ 6 ಮತ್ತು 11ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.


ಇನ್ನೂ ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ಆಗಸ್ಟ್ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ. ಇನ್ನೂ 25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 5ರ ಬದಲಾಗಿ 06.00 ಕ್ಕೆ ಪ್ರಾರಂಭವಾಗಲಿದೆ.


ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ ಆಗಸ್ಟ್‌ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.12 ಕ್ಕೆ ಪ್ರಾರಂಭವಾಗಲಿದೆ. 25 ರಂದು ಮೊದಲ ರೈಲು ಸೇವೆಯು ಬೆಳಿಗ್ಗೆ 05.00 ಕ್ಕೆ ಪ್ರಾರಂಭವಾಗಲಿದೆ. ಇನ್ನೂ ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.


Nk Channel Final 21 09 2023