News Karnataka Kannada
Friday, May 03 2024
ಬೆಂಗಳೂರು

ಇಂದಿರಾ ಕ್ಯಾಂಟೀನ್, ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ: ಸಿಎಂ

Millets to be used in Indira canteens, school meals: CM
Photo Credit : News Kannada

ಬೆಂಗಳೂರು: ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ  ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ  ಬಳಕೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಆಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಆಹಾರ ಸ್ವಾವಲಂಭನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದರು.

ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಘೋಷಿಸಿದರು.

ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದರು.

ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ ಎಂದರು.

2004 ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು